ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕ, ಶೈಕ್ಷಣಿಕ ಹಾಗೂ ಉದ್ಯೋಗದ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ.
ಕೊಪ್ಪಳ: ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ರಜಪೂತ ಸಮಾಜದ ಏಳಿಗೆಗೆ ರಜಪೂತ ಅಭಿವೃದ್ಧಿ ಮಂಡಳಿ ಕೂಡಲೇ ಸ್ಥಾಪಿಸಲು ಕೊಪ್ಪಳ ಜಿಲ್ಲಾ ರಜಪೂತ್ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕ, ಶೈಕ್ಷಣಿಕ ಹಾಗೂ ಉದ್ಯೋಗದ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ. ನಮ್ಮ ಯುವ ಪೀಳಿಗೆಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗದೇ ಸಮಾಜ ಇಂದಿಗೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ, ಈಗಾಗಲೇ ಕಲಬುರಗಿ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ರಜಪೂತ ಸಮಾಜದ ಕೌಟುಂಬಿಕ ಸಮೀಕ್ಷೆ ಹಾಗೂ ಡಿಜಿಟಲ್ ನೋಂದಣಿ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಸದರಿ ಸಮಗ್ರ ದತ್ತಾಂಶಗಳ ವರದಿ ಬೆಂಗಳೂರಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಪರಿಶೀಲನೆಯಲ್ಲಿದೆ, ಈ ಮಹತ್ವದ ಅಭಿಯಾನದ ಮೂಲಕ ಇಡೀ ರಾಜ್ಯದ ರಜಪೂತ ಸಮಾಜದ ಬಂಧು ಒಗ್ಗಟ್ಟಾಗುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಆರಂಭವಾಗಿರುವ ಈ ಪ್ರಕ್ರಿಯೆಗೆ ಪೂರಕವಾಗಿ ಈಗ ಕೊಪ್ಪಳ ಜಿಲ್ಲೆಯ ರಜಪೂತ ಬಾಂಧವರೂ ಸಹ ಧ್ವನಿಗೂಡಿಸುತ್ತಿದ್ದೇವೆ ಆದ್ದರಿಂದ, ನಮ್ಮ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ತಕ್ಷಣವೇ ಸ್ಥಾಪಿಸಲು ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ನಿಮ್ಮ ಜಿಲ್ಲಾಡಳಿತದ ಪರವಾಗಿ ತುರ್ತು ಶಿಫಾರಸು ಪತ್ರ ಕಳುಹಿಸಿಕೊಡಬೇಕಾಗಿ ಈ ಮೂಲಕ ವಿನಂತಿಸುತ್ತೇವೆ ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ರಜಪೂತ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರ್ ಸಿಂಗ್ ರಜಪೂತ, ವೇಣುಗೋಪಾಲ್ ಸಿಂಗ್, ಭೀಮಸಿಂಗ್, ನರಪತ್ ಸಿಂಗ್, ವೀರೇಂದ್ರ ಸಿಂಗ್ ಉಪಸ್ಥಿತರಿದ್ದರು.