ಸಾರಾಂಶ
ಹಿರಿಯೂರು: 2024-25 ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪದ್ಧತಿಯನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳಿ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಲೋಕೇಶ್ ಮನವಿ ಮಾಡಿದ್ದಾರೆ. ತಾಲೂಕಿನಲ್ಲಿ ಒಟ್ಟು ಅಂದಾಜು 52 ಸಾವಿರ ಬಿಪಿಎಲ್ ಕುಟುಂಬಗಳಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ರೈತರು, ಬಡತನ ರೇಖೆಗಿಂತ ಕೆಳಮಟ್ಟದಲ್ಲಿರುವ ಇತರೆ ಕುಟುಂಬಗಳಲ್ಲಿರುವ ಫಲಾನುಭವಿಗಳು ತಮ್ಮ ಸ್ವಂತ ಜಮೀನಿನಲ್ಲಿ 2024-25ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪದ್ಧತಿ ಕಾರ್ಯಕ್ರಮ ಸದುಪಯೋಗ ಮಾಡಿಕೊಳ್ಳ ಬಹುದು. ತಾಲೂಕಿನ ರೈತರು ತಮ್ಮ ತಮ್ಮ ಹೋಬಳಿಗಳಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆಯ ವಿವರಗಳನ್ನು ಪಡೆಯ ಬಹುದು. ಈ ಕಾರ್ಯಕ್ರಮವನ್ನು ರೈತರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡರೆ ಸಿಂಚಾಯಿ ಯೋಜನೆಯಡಿ ಇಲಾಖೆಯಿಂದ ಸಹಾಯಧನ ನೀಡಲಾಗುವುದು. ಈ ಯೋಜನೆಯಡಿ ಎಲ್ಲಾ ವರ್ಗದ ರೈತ ಫಲಾನುಭವಿಗಳಿಗೆ ಶೇ 90 ರಷ್ಟು ಸಹಾಯಧನ ಲಭ್ಯವಿರುತ್ತದೆ ಎಂದಿದ್ದಾರೆ.
--