ಸಾರಾಂಶ
ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳು ಶನಿವಾರ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಶಾಸಕ ಡಾ. ಮಂತರಗೌಡ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳು ಶನಿವಾರ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಶಾಸಕ ಡಾ. ಮಂತರಗೌಡ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.ಕೊಡಗು ಜಿಲ್ಲೆಯಲ್ಲಿ ಸಂಖ್ಯೆ ಮಿತಿಯ ನಿಯಮದಿಂದ ಅನುದಾನಿತ ಶಾಲೆಗಳು ಮುಚ್ಚುತ್ತಿವೆ. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಸಂಖ್ಯೆಯ ಮಿತಿಯ ನಿಯಮವನ್ನು ರದ್ದುಪಡಿಸಲು ಕೋರಿದರು.ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಮುಂಬಡ್ತಿಯನ್ನು ಶೀಘ್ರವಾಗಿ ಆರಂಭ ಮಾಡಬೇಕು. ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಯಿಂದ ಮುಖ್ಯಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಬೇಕು ಮತ್ತು ಅನುದಾನಿತ ಶಾಲಾ ಶಿಕ್ಷಕರೂ ಅರೋಗ್ಯ ಸಂಜೀವಿನಿ ನೀಡಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿದರು.ಕೆಲವೇ ದಿನಗಳಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ನೀಡುತ್ತೇವೆ, ಮುಚ್ಚಿದ ಶಾಲೆಗಳ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸುವ ಭರವಸೆ ನೀಡಿದರು.
ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಾದರಿಯಲ್ಲಿ ಉತ್ತೀರ್ಣತೆಯ ಮಾನದಂಡವನ್ನು ಆಂತರಿಕ ಅಂಕಗಳು ಸೇರಿದಂತೆ ಶೇ.೩೩ ಅಂಕಗಳಿಗೆ ಉತ್ತೀರ್ಣತೆಯ ಮಾನದಂಡದ ಆದೇಶ ಮಾಡಿಸಿದ ಸಚಿವ ಮಧು ಬಂಗಾರಪ್ಪ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು.ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎಚ್.ಜಿ.ಕುಮಾರ್, ಸೋಮವಾರಪೇಟೆ ತಾಲೂಕು ಘಟಕದ ರಾಜ್ಯ ಪರಿಷತ್ ಸದಸ್ಯ ಕೆ.ಪಿ.ಜಯಕುಮಾರ್, ಉಪಾಧ್ಯಕ್ಷ ಯಶವಂತ್, ಜಿಲ್ಲಾ ನಿರ್ದೇಶಕ ಸತ್ಯ ನಾರಾಯಣ ಇದ್ದರು.
;Resize=(128,128))
;Resize=(128,128))
;Resize=(128,128))