7ನೇ ವೇತನ ಜಾರಿಗಾಗಿ ಸಚಿವ ಮಧುಗೆ ಮನವಿ

| Published : Jul 01 2024, 01:48 AM IST

ಸಾರಾಂಶ

ವಿಜಯಪುರ ಜಿಲ್ಲಾ ಘಟಕದಿಂದ ಭಾನುವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಗ್ರಾಮೀಣ ಭಾಗದ ಶಿಕ್ಷಕರಿಗೆ ಗ್ರಾಮೀಣ ಭತ್ಯೆ ಹಾಗೂ ಏಳನೇ ವೇತನ ಶೀಘ್ರ ಜಾರಿಗೆ ತರುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಿರಾಳಕೊಪ್ಪದಲ್ಲಿ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕ, ವಿಜಯಪುರ ಜಿಲ್ಲಾ ಘಟಕದಿಂದ ಭಾನುವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಗ್ರಾಮೀಣ ಭಾಗದ ಶಿಕ್ಷಕರಿಗೆ ಗ್ರಾಮೀಣ ಭತ್ಯೆ ಹಾಗೂ ಏಳನೇ ವೇತನ ಶೀಘ್ರ ಜಾರಿಗೆ ತರುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶರಣಪ್ಪಗೌಡ ಆರ್‌.ಕೆ., ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಲೇಶ ನವಲೆ, ಸಂಘದ ರಾಜ್ಯ ಕಾರ್ಯಾಧ್ಯಕ್ಷ ಸಿದ್ದಣ್ಣ ಉಕ್ಕಲಿ, ರಾಜ್ಯ ಸಂಚಾಲಕ ಲಕ್ಕಮ್ಮನವರ, ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ ದೊಡ್ಡಮನಿ, ಜಿಲ್ಲಾ ಸಂಚಾಲಕ ವಸಂತರಾವ ಪವಾರ, ಬ.ಬಾಗೇವಾಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿ ಅಧ್ಯಕ್ಷ ಹಾಗೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಆರ್‌.ಡಿ.ಪವಾರ ಇತರರು ಇದ್ದರು ಎಂದು ಸಂಘದ ರಾಜ್ಯ ಕಾರ್ಯಧ್ಯಕ್ಷ ಸಿದ್ದಣ್ಣ ಉಕ್ಕಲಿ ತಿಳಿಸಿದ್ದಾರೆ.