ಸಾರಾಂಶ
ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪಾಧಿಕಾರಿಗಳು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
ಮೊಳಕಾಲ್ಮುರು: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪಾಧಿಕಾರಿಗಳು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಬುಧವಾರ ಮನವಿ ಸಲ್ಲಿಸಿರುವ ಅವರು 7ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಪಡೆದು ರಾಜ್ಯದ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆನಂತರ ಆದೇಶ ಹೊರಡಿಸಬೇಕು. ಸರ್ಕಾರ ಈಗಾಗಲೆ ನೀಡಿರುವ ಶೇ.17ರಷ್ಟು ಪ್ರಮಾಣದಲ್ಲಿ ಮದ್ಯಂತರ ಭತ್ಯೆಯೂ ಸೇರಿದಂತೆ ಶೇ.40ರಷ್ಟು ಪ್ರಮಾಣದಲ್ಲಿ ಪೆಟ್ ಮೆಂಟ್ ಸೌಲಭ್ಯವನ್ನು ಒದಗಿಸಬೇಕು ಎಂದಿದ್ದಾರೆ.ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗು ಸಂಧ್ಯಾಕಾಲ ಬದುಕು ಅತ್ಯಂತ ಕಷ್ಟದಾಯವಾಗಿದೆ. ಎನ್ ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರಕಾರದಿಂದ ಜವಾಬ್ದಾರಿಯಾಗಿ ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ್, ಜಾರ್ಖಂಡ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಜಾರಿಗೆ ತಂದಿರುವ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಎನ್ ಪಿಎಸ್ ಯೋಜನೆಯನ್ನು ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕೆಂದು ಮನವಿ ಸಲ್ಲಿಸಿದರು.
ಸ್ಥಳದಲ್ಲಿ ನೌಕರ ಸಂಘದ ಅಧ್ಯಕ್ಷ ಈರಣ್ಣ, ಕಾರ್ಯುದರ್ಶಿ ಮಲ್ಲೇಶಪ್ಪ, ರಾಜ್ಯ ಪರಿಷತ್ ಸದಸ್ಯ ಕೆಂಚಲಿಂಗಪ್ಪ, ಗೌರವಾಧ್ಯಕ್ಷ ರಾಮಚಂದ್ರಪ್ಪ ಇದ್ದರು.