ಮೂಲ ಸೌಕರ್ಯ ಒದಗಿಸಿಕೊಡುವಂತೆ ಸಂಸದರಿಗೆ ಮನವಿ

| Published : Jul 17 2025, 12:30 AM IST

ಸಾರಾಂಶ

ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿಯಿಂದ ತಲಕಾವೇರಿ ಸಂಚಾರಕ್ಕೆ ಉತ್ತಮ ರಸ್ತೆಗಳ ನಿರ್ಮಾಣವಾಗಬೇಕಾಗಿದೆ. ಕುಂದಚೇರಿ ಗ್ರಾಮದಲ್ಲಿ ಇರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವಿರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶರತ್ ಪದಕಲ್ಲು ಮನವಿ ಸಲ್ಲಿಸಿದರು.

ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ವಿಧಾನ ಸಭಾ ಅಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಾಲ್ಪಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಅಶ್ವಿನ್ ಕಾಂಗಿರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮನುಮುತ್ತಪ್ಪ, ವಿ.ಎಸ್.ಎಸ್.ಎನ್ ಅಧ್ಯಕ್ಷ ಶ್ರೀಧರ್, ನಿರ್ದೇಶಕರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.ಈ ಸಂದರ್ಭ ಸಿಂಗತೂರು ಗ್ರಾಮದ ಬಹು ವರ್ಷಗಳ ಬೇಡಿಕೆಯ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ದಾರದಾ ವ್ಯವಸ್ಥೆಯನ್ನು ವೀಕ್ಷಿಸಿದ ಸಂಸದರು, ಜೀರ್ಣೋದ್ಧಾರ ಕಾರ್ಯಕ್ಕೆ ಅನುದಾನದ ಒದಗಿಸುವ ಭರವಸೆ ನೀಡಿದರು.