ಪ್ಲಾಸ್ಟಿಕ್‌ ರಾಷ್ಟ್ರಧ್ವಜ ಮಾರಾಟ ತಡೆ ಆಗ್ರಹಿಸಿ ತಹಸಿಲ್ದಾರ್‌ಗೆ ಮನವಿ

| Published : Aug 07 2024, 01:01 AM IST

ಪ್ಲಾಸ್ಟಿಕ್‌ ರಾಷ್ಟ್ರಧ್ವಜ ಮಾರಾಟ ತಡೆ ಆಗ್ರಹಿಸಿ ತಹಸಿಲ್ದಾರ್‌ಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹೆಸರಿನಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನ ತಡೆಗಟ್ಟುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಕುಶಾಲನಗರ ತಹಸಿಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹೆಸರಿನಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನ ತಡೆಗಟ್ಟುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ತಹಸಿಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.

ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆ.೧೫ ಮತ್ತು ಜ.೨೬ ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರ ಕಾಗದದ, ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜ ಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳ ಬಳಕೆಗೆ ನಿರ್ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ 1950 ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆ 1971 ಉಲ್ಲಂಘನೆಯಾಗುತ್ತಿರುವುದನ್ನು ತಡೆಗಟ್ಟಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನ ತಡೆಯಲು ವಿವಿಧ ಮಾಧ್ಯಮಗಳ ಮೂಲಕ ಜನಜಾಗೃತಿ ಮೂಡಿಸುವುದು ಅಗತ್ಯ. ಹಾಗಾಗಿ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಶಾಲನಗರದ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ನೀಡಲಾಯಿತು.

ಶ್ರೀ ಮುತ್ತಪ್ಪ ದೇವಸ್ಥಾನದ ಪವನ್ ಬಿದ್ದಪ್ಪ, ಆರ್ಯವೈಶ್ಯ ಮಂಡಳಿಯ ಬಿ.ಎಲ್. ಅಶೋಕ್ ಕುಮಾರ್, ಬಿ.ಎಲ್. ಸತೀಶ್, ನಟರಾಜ್, ಅಶೋಕ್ ರಾವಲ್, ಪ್ರಮುಖರಾದ ಸೋಮಶೇಖರ್ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಅಮೃತ್ ರಾಜ್ ಇದ್ದರು.