ಮೂಲಸೌಕರ್ಯಕ್ಕೆ ಆಗ್ರಹಿಸಿ ತಹಸೀಲ್ದಾರಗೆ ಮನವಿ

| Published : Jan 07 2024, 01:30 AM IST / Updated: Jan 07 2024, 05:20 PM IST

ಸಾರಾಂಶ

ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ನಮ್ಮತ್ತ ತಿರುಗಿಯೂ ನೋಡಿಲ್ಲ. ಮೂಲ ಸೌಲಭ್ಯಗಳಿಲ್ಲದೇ ಜೀವನ ಕಷ್ಟ ಸಾಧ್ಯವಾಗಿದ್ದು ಕೂಡಲೇ ಸೂಕ್ತ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು.

ಬ್ಯಾಡಗಿ: ಪಟ್ಟಣದ ಅಗಸನಹಳ್ಳಿಯ ನಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಪ್ರಕಾಶ ಐರಣಿ, ಅಗಸನಹಳ್ಳಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ನಾವು ಮನೆ ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದೇವೆ.ಇಲ್ಲಿ ಬಡವರು ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸ ಮಾಡುತ್ತಿದ್ದು, ಇಲ್ಲಿನ ನಿವಾಸಿಗಳಿಗೆ ರಸ್ತೆ, ಚರಂಡಿ ಸೇರಿದಂತೆ ವಿದ್ಯುತ್ ದೀಪ, ಶುದ್ಧ ಕುಡಿವ ನೀರಿನ ಸೌಲಭ್ಯವಿಲ್ಲ ಇದರಿಂದ ನಾವುಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ಕೂಡಲೇ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.

ಈ ವೇಳೆ ಅನಿತಾ ಪೂಜಾರ ಮಾತನಾಡಿ, ಮೂಲ ಸೌಲಭ್ಯಗಳ ಕೊರತೆಯಿಂದ ನಾವು ತತ್ತರಿಸಿ ಹೋಗಿದ್ದೇವೆ. ನಾವು ಬ್ಯಾಡಗಿಯಲ್ಲಿ ಇದ್ದೇವೇಯೋ ಇಲ್ಲವೋ ಅನುಮಾನ ಮೂಡುತ್ತಿದೆ, ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ನಮ್ಮತ್ತ ತಿರುಗಿಯೂ ನೋಡಿಲ್ಲ. ಮೂಲ ಸೌಲಭ್ಯಗಳಿಲ್ಲದೇ ಜೀವನ ಕಷ್ಟ ಸಾಧ್ಯವಾಗಿದ್ದು ಕೂಡಲೇ ಸೂಕ್ತ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು.

ಈ ವೇಳೆ ನಿವಾಸಿಗಳಾದ ಭಾರತಿ, ಪ್ರಕಾಶ್ ಹೆಗಡೆ, ಬೀರಪ್ಪ ಮೋಟೆಬೆನ್ನೂರ, ಸುಧಾ ಗಾಜೇರ, ರೇಣುಕಾ ಹೆಗಡೆ ಸೇರಿದಂತೆ ಹಲವರು ಭಾಗವಹಿಸಿದ್ದರು.