ಸಾರಾಂಶ
ಜನವರಿ 4ರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಕಾರ್ಕಳ
ಇಲ್ಲಿನ ಕೊರಗ ಸಂಘಗಳ ಒಕ್ಕೂಟವು ತಮ್ಮ ಸಮುದಾಯಕ್ಕೆ ನಿವೇಶನ, ಭೂಮಿಯನ್ನು ವಿತರಿಸುವಂತೆ ಆಗ್ರಹಿಸಿ ಕಾರ್ಕಳ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.ಮುಖ್ಯವಾಗಿ ಇಲ್ಲಿನ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನದ ಹಕ್ಕು ಪತ್ರಕ್ಕಾಗಿ ಆಗ್ರಹಿಸಲಾಯಿತು. ಅಲ್ಲದೆ ದರ್ಕಾಸು ಭೂಮಿಗಾಗಿ ಸಲ್ಲಿಸಿರುವ ಅರ್ಜಿಗಳ ಮಂಜೂರಾತಿಯ ಬಗ್ಗೆಯೂ ತಹಸೀಲ್ದಾರರೊಂದಿಗೆ ಸಮುದಾಯದ ಮುಖಂಡರು ಮಾತುಕತೆ ನಡೆಸಿದರು. ಜನವರಿ 4ರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು ಮತ್ತು 10 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಶೀಘ್ರವಾಗಿ ಇತರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿಯೂ ತಿಳಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೇಖರ್ ಕೆಂಜೂರು, ಅಮರ್ ಪಳ್ಳಿ ಹಾಗೂ ಕಾರ್ಕಳ ಬಂಡಿಮಠದ ನಿವಾಸಿಗಳಾದ ಸುನಂದಾ, ಲೀಲಾ, ಲಲಿತಾ, ಚಂದ್ರಾವತಿ, ಶಕುಂತಲಾ, ಗಣೇಶ್, ವಸಂತ, ಪ್ರಸಾದ್, ಶಶಿಕಲಾ ನಕ್ರೆ, ಅಕ್ಕು ತೆಳ್ಳಾರ್ ಮತ್ತು ಇತರರು ಉಪಸ್ಥಿತರಿದ್ದರು.