ಸಾರಾಂಶ
ಸರಿಯಾದ ನಿರ್ವಹಣೆ, ಶುಚಿತ್ವ ಇಲ್ಲದೇ ದುರ್ವಾಸನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ನಗರದ ಕೆ.ಎಸ್.ಆರ್.ಟಿ.ಸಿ., ಸಿಟಿ ಮತ್ತು ಸರ್ವೀಸ್ ಬಸ್ ನಿಲ್ದಾಣಗಳಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಕೆ.ಎಸ್. ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಎ.ಟಿ.ಎಂ. ಸೌಲಭ್ಯ ಇಲ್ಲ, ಶೌಚಾಲಯ ಬಳಸಲು 10 ರು. ವಸೂಲಿ ಮಾಡಲಾಗುತ್ತಿದೆ. ಬಸ್ ನಿಲ್ದಾಣದ ಶುಚಿತ್ವ ನಿರ್ವಹಿಸಲು ಕೇವಲ ಮೂರು ಮಹಿಳೆಯರನ್ನು ನೇಮಿಸಿದ್ದಾರೆ. ಪುರುಷ ಕೆಲಸಗಾರರನ್ನು ನೇಮಿಸುವ ಅಗತ್ಯವಿದೆ. ಸರಿಯಾದ ನಿರ್ವಹಣೆ, ಶುಚಿತ್ವ ಇಲ್ಲದೇ ದುರ್ವಾಸನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾ ಪಾಂಗಾಳ, ಉಪಾಧ್ಯಕ್ಷೆ ದೇವಕಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಸ್ಟಾನಿ ಡಿಸೋಜ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣಕುಮಾರ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಮಹಿಳಾ ಜಾಲತಾಣ ಸಂಚಾಲಕಿ ರಶ್ಮಿ, ಜಿಲ್ಲಾ ಸದಸ್ಯರಾದ ಅಶೋಕ್, ಮಲ್ಲು ಮೊದಲಾದವರು ಉಪಸ್ಥಿತರಿದ್ದರು.