ಹೊರಗುತ್ತಿಗೆ ನೌಕರರ ಸಂಘದ ಸದಸ್ಯರಿಂದ ಅರಣ್ಯ ಸಚಿವಗೆ ಮನವಿ

| Published : Nov 14 2025, 03:45 AM IST

ಹೊರಗುತ್ತಿಗೆ ನೌಕರರ ಸಂಘದ ಸದಸ್ಯರಿಂದ ಅರಣ್ಯ ಸಚಿವಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರಾಜ್ಯ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ನಿಯೋಗ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು, ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು, ದಿನಗೂಲಿ ಸೇವಾ ಅವಧಿ, ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಗೌರವ ಅಧ್ಯಕ್ಷರಾದ ಎ ಎಂ ನಾಗರಾಜ ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.