ನರಸಿಂಹರಾಜಪುರ: ಪೌರ ಸೇವಾ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಪ್ರಾರಂಭಿಸಿದ್ದು ಅವರ ನ್ಯಾಯಬದ್ದ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಬೆಂಗಳೂರಿನಲ್ಲಿ ರಾಜ್ಯ ಪೌರಾಡಳಿತ ಸಚಿವ ರಹೀಂ ಖಾನ್ ಗೆ ಗುರುವಾರ ಮನವಿ ಪತ್ರ ಅರ್ಪಿಸಿದರು.

ಮನವಿ ಪತ್ರದಲ್ಲಿ, 2025 ರ ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಪೌರ ಸೇವಾ ನೌಕರರು ತಮ್ಮ ವಿವಿಧೆಡೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 5 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಪೌರಾಡಳಿತ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಪೌರ ನೌಕರರು ಹಾಗೂ ಹೊರ ಗುತ್ತಿಗೆ ಅಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ನೀರು ಸರಬರಾಜು ನೌಕರರು ಸೇರಿದಂತೆ ಎಲ್ಲಾ ಪೌರ ಸೇವಾ ನೌಕರರು ಮತ್ತೆ ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ಪ್ರಾರಂಭಿಸಿದ್ದಾರೆ.

ಅದರಂತೆ ನರಸಿಂಹಾಜಪುರ ಪಟ್ಟಣ ಪಂಚಾಯಿತಿಯಲ್ಲೂ ಕೆಲಸ ನಿರ್ವಹಿಸುತ್ತಿದ್ದ ಪೌರ ನೌಕರರು ಸಹ ಡಿ. 5 ರಿಂದ ಪಪಂ ಮುಂಭಾಗದಲ್ಲಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ.ಇದರಿಂದ ಸಾರ್ವಜನಿಕ ಕಾರ್ಯಗಳಿಗೆ, ಮೂಲ ಭೂತ ಸೌಕರ್ಯ ಗಳಾದ ನೀರು ಪೂರೈಕೆ, ನಗರ ಸ್ವಚ್ಛತಾ ಕಾರ್ಯಗಳಿಗೆ ತೊಂದರೆಯಾಗುತ್ತದೆ. ಇತರ ಎಲ್ಲಾ ಸರ್ಕಾರಿ ನೌಕರರಂತೆ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಪೌರ ಸೇವಾ ನೌಕರರು ಹಾಗೂ ಹೊರ ಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.