ತಮಿಳುನಾಡು ಸರ್ಕಾರ ವಜಾಗೊಳಿಸುವಂತೆ ರಾಷ್ಟಪತಿಗೆ ಮನವಿ

| Published : Mar 23 2024, 01:18 AM IST

ತಮಿಳುನಾಡು ಸರ್ಕಾರ ವಜಾಗೊಳಿಸುವಂತೆ ರಾಷ್ಟಪತಿಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ತಮಿಳುನಾಡು ಸರ್ಕಾರ ಲೋಕಸಭೆಯ ಚುನಾವಣೆಯ ಸಂಬಂಧ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಪ್ರಮುಖವಾಗಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದಲ್ಲಿರುವ ಮೇಕೆದಾಟು ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲವೆಂದು ಹೇಳಿರುವುದು ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಅತ್ಯಂತ ಖಂಡಿನೀಯವಾಗಿದೆ ಎಂದರು.ಚುನಾವಣೆಯ ಸಂದರ್ಭದಲ್ಲಿ ಬೇರೆ ರಾಜ್ಯದ ಕುಡಿಯುವ ನೀರಿನ ಯೋಜನೆಯ ಬಗ್ಗೆ ಮಾತನಾಡಿರುವುದು ಚುನಾವಣಾ ನೀತಿಯನ್ನು ತಮಿಳುನಾಡು ಸರ್ಕಾರ ಉಲ್ಲಂಘನೆ ಮಾಡಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅಗೌರವವನ್ನು ತೋರಿಸಿದ್ದಾರೆ ಎಂದು ದೂರಿದರು. ಕರ್ನಾಟಕ ರಾಜ್ಯದ ಮೇಕೆ ದಾಟು ಯೋಜನೆ ಅನುಷ್ಠಾನಗೊಂಡರೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಸಿಗುತ್ತದೆ. ಮತ್ತು ಕುಡಿಯುವ ನೀರಿನ ಯೋಜನೆಗೆ ಯಾವುದೇ ಕಾರಣಕ್ಕೂ ಯಾವುದೇ ಸರ್ಕಾರವಾಗಲಿ, ಯಾವುದೇ ವ್ಯಕ್ತಿಯಾಗಲಿ ಅಡ್ಡಿಪಡಿಸಲು ಸಾಧ್ಯವಿಲ್ಲ. ಇದು ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಕುಡಿಯುವ ನೀರಿನ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಇಷ್ಟೆಲ್ಲಾ ಗೊತ್ತಿದ್ದರೂ ತಮಿಳುನಾಡು ಸರ್ಕಾರ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಇಂತಹ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯವಾಗಿದೆ.

ತಮಿಳುನಾಡು ಸರ್ಕಾರವನ್ನು ವಜಾ ಮಾಡಿ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು. ತಮಿಳುನಾಡು ಸರ್ಕಾರದ ಧೋರಣೆಯನ್ನು ಚುನಾವಣಾ ಆಯೋಗಕ್ಕೆ ತಿಳಿಸಿ‌ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದರು.

ಈ ಸಂದರ್ಭದಲ್ಲಿ.ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ಶ್ರೀಗಂಧ ಕನ್ನಡ ಯುವವೇದಿಕೆ ಅಧ್ಯಕ್ಷ ರವಿಚಂದ್ರಪ್ರಸಾದ್ ಕಹಳೆ ಹಾಜರಿದ್ದರು.