ಕೈ ಅಭ್ಯರ್ಥಿಗಳಿಗೆ ಮತ ನೀಡಿ ಯುವ ಕಾಂಗ್ರೆಸ್ ಮನವಿ

| Published : May 27 2024, 01:07 AM IST

ಸಾರಾಂಶ

ಕೊಪ್ಪ, ಜೂನ್‌, ೩ ರಂದು ನಡೆಯಲಿರುವ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾಚರಣ್ ಹೇಳಿದರು.

ವಿಧಾನ ಪರಿಷತ್‌ ಪದವೀಧರರ - ಶಿಕ್ಷಕರ ಕ್ಷೇತ್ರಗಳ ಚುನಾವಣೆ

ಕನ್ನಡಪ್ರಭ ವಾರ್ತೆ, ಕೊಪ್ಪ

ಜೂನ್‌, ೩ ರಂದು ನಡೆಯಲಿರುವ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾಚರಣ್ ಹೇಳಿದರು.

ಕಾಂಗ್ರೆಸ್ ಪಕ್ಷದಿಂದ ನೈರುತ್ಯ ಪದವೀಧರರ ಕ್ಷೇತ್ರಕ್ಕೆಆಯನೂರು ಮಂಜುನಾಥ್ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ. ಶಿಕ್ಷಕರು ಮತ್ತು ಪದವೀಧರರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವಲ್ಲಿ ಯಶಸ್ವಿಯಾಗಿದೆ. ಮೊದಲ ಹಂತದಲ್ಲಿ ಒಪಿಎಸ್ ಜಾರಿಯಾಗಿದೆ. ಇದರಿಂದ ಶಿಕ್ಷಕರಿಗೆ ಅನುಕೂಲವಾಗಿದೆ. ಮುಂದಿನ 4 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಹಂತ ಹಂತವಾಗಿ ಒಪಿಎಸ್ ಜಾರಿ ಮಾಡಲಿದೆ ಎಂದ ಅವರು, ನಿರುದ್ಯೋಗಿ ಪದವೀಧರರಿಗೆ ಯುವ ನಿಧಿ ಹೆಸರಿನಲ್ಲಿ ಭತ್ಯೆ ಸಹ ನೀಡುತ್ತಿದೆ. ಕಾಂಗ್ರೆಸ್ ಸರ್ಕಾರ ಶಿಕ್ಷಕರ ಮತ್ತು ಪದವೀಧರರ ಪರವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು.ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಶಿಕ್ಷಣಿಕ ಸಾಲ ಮನ್ನಾ ಮಾಡುವುದಾಗಿ ಪ್ರಾಣಾಳಿಕೆಯಲ್ಲಿ ತಿಳಿಸಲಾಗಿದೆ. ಇದರಿಂದ ಸಹ ಪದವೀಧರರಿಗೆ ಅನುಕೂಲವಾಗಲಿದೆ ಎಂದ ಅವರು ಈ ಬಾರಿ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ನೈರುತ್ಯ ಪದವೀಧರರ, ಶಿಕ್ಷಕರ ತಾಲೂಕು ಸಂಚಾಲಕ ಜೇಸುದಾಸ್, ಯುವ ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷ ಸಂತೋಷ್ ಕುಲಾಸೋ, ಕಾರ್ಯಕರ್ತರಾದ ನರ್ತನ್, ರಾಶ್ವಿಕ್ ಇದ್ದರು.