ಸಾರಾಂಶ
ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.೩ರಂದು ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎಂ. ನಾಗೇಂದ್ರ ಬಾಬು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಕದಂಬ ನಾ.ಅಂಬರೀಶ್ ಶಿಕ್ಷಕರ ಮತದಾರರಲ್ಲಿ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ನಾಗೇಂದ್ರಬಾಬು ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷದಿಂದ ಅವರು ಸ್ಪರ್ಧೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅವರಿಗೆ ಉತ್ತಮ ವಾತಾವರಣ ವ್ಯಕ್ತವಾಗುತ್ತಿದೆ. ಶಿಕ್ಷಕರು ತಮ್ಮ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯದ ಮತವನ್ನು ಅವರಿಗೆ ನೀಡಿ ಆಶೀರ್ವದಿಸುವ ಮೂಲಕ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದರು. ದಕ್ಷಿಣ ಶಿಕ್ಷಕ ಕ್ಷೇತ್ರದಲ್ಲಿ ೨೦ ವರ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿರುವವರು ಶಿಕ್ಷಕರ ಸಮಸ್ಯೆ ಈಡೇರಿಸಿಲ್ಲ ಎಂದು ಮರಿತಿಬ್ಬೇಗೌಡ ಹೆಸರು ಹೇಳದೆ ಪರೋಕ್ಷವಾಗಿ ಅಂಬರೀಶ್ ಆರೋಪಿಸಿದರು. ಶಿಕ್ಷಕರ ಸಮಸ್ಯೆ ಈಡೇರಿಕೆಗೆ ಈ ಬಾರಿ ಕರ್ನಾಟಕ ಜನತಾ ಪಕ್ಷಕ್ಕೊಂದು ಅವಕಾಶ ನೀಡಿ ಎಂದರು. ಪಕ್ಷದ ಅಭ್ಯರ್ಥಿ ಎಂ. ನಾಗೇಂದ್ರ ಬಾಬು ಮಾತನಾಡಿ, ಜೂ.೩ರಂದು ನಡೆಯಲಿರುವ ಚುನಾವಣೆಯಲ್ಲಿ ನನಗೆ ಮತ ನೀಡುವ ಮೂಲಕ ಶಿಕ್ಷಕ ಮತದಾರ ಪ್ರಭುಗಳು ತಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ನಂಜುಂಡನಾಯಕ, ಶಂಭುನಾಯಕ, ಬಿ. ಪ್ರಭುಸ್ವಾಮಿ ಹಾಜರಿದ್ದರು.