ಸಾರಾಂಶ
ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟಸ್ಟ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬೆಳಗಾವಿ: ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟಸ್ಟ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಕ್ಕಿಂತ ಅಧಿಕ, ಪಿಯುಸಿ ಪರೀಕ್ಷೆಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಗಳಿಸಿದ ದಿಗಂಬರ ಜೈನ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಕೈಬರಹದ ಅರ್ಜಿಯನ್ನು ಆಗಸ್ಟ್ 10 ರೊಳಗೆ ಸಲ್ಲಿಸಬೇಕು ಎಂದು ಟ್ರಸ್ಟ್‌ನ ಅಧ್ಯಕ್ಷ ಎಸ್.ಜಿತೇಂದ್ರಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಳಾಸ: ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟ್ರಸ್ಟ್, 369, 42ನೇ ಕ್ರಾಸ್, 8ನೇ ಬ್ಲಾಕ್, ಜಯನಗರ, ಬೆಂಗಳೂರು-560070 ಸಂಪರ್ಕಿಸಬಹುದು.