ಸಾರಾಂಶ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳಡಿ ಸಾಲ ಪಡೆಯಲಿಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಫಲಾನುಭವಿಗಳು ಆ.31ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳಡಿ ಸಾಲ ಪಡೆಯಲಿಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಫಲಾನುಭವಿಗಳು ಆ.31ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.ಬಸವ ಬೆಳಗು ಯೋಜನೆಯಡಿ ಸಾಲಕ್ಕೆ ಅರ್ಜಿ ಸಲ್ಲಿಸುವವರು ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ವಾರ್ಷಿಕ 1 ಲಕ್ಷದಿಂದ ಗರಿಷ್ಠ 4ರಿಂದ 5 ಲಕ್ಷದವರೆಗೆ ಶೇ.2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ.ವಿದ್ಯಾರ್ಥಿಗಳು ನೀಟ್ ಇಲ್ಲವೇ ಸಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸೀಟು ಪಡೆದಿರಬೇಕು.
ವಿದೇಶ ವಿದ್ಯಾವಿಕಾಸ: ಈ ಯೋಜನೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಾರ್ಷಿಕ ಗರಿಷ್ಠ 10 ಲಕ್ಷಗಳಂತೆ 3 ವರ್ಷದವರೆಗೆ ಒಟ್ಟು 20 ಲಕ್ಷ ರು.ಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ: 080 22865522- 9900012351 ಸಂಪರ್ಕಿಸಲು ಕೋರಲಾಗಿದೆ.