ಸಾರಾಂಶ
ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ಪಡೆದುಕೊಳ್ಳಲು ಈ ಕಚೇರಿಯಲ್ಲಿ ಲಭ್ಯವಿರುವ ನಿಗದಿತ ನಮೂನೆಯ ಅರ್ಜಿ ಪಡೆದು ಫೆ.29 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್‌ಕೋರ್ಸ್ ರಸ್ತೆ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ:ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮದಡಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಹೊಸದಾಗಿ ಸ್ವೀಕೃತವಾಗುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಸರ್ಕಾರದ ಆದೇಶದಂತೆ ಕೊನೆಯ ದಿನಾಂಕ ನಿಗದಿಪಡಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ (ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗುವುದಿಲ್ಲ.2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರು. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (ಎಸ್‌ಎಸ್‌ಪಿ) ವಿದ್ಯಾರ್ಥಿಗಳ ಲಾಗಿನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಫೆ.29 ರೊಳಗೆ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.