ಸಾರಾಂಶ
Application Invitation for Various Schemes
ಕನ್ನಡಪ್ರಭ ವಾರ್ತೆ ಯಾದಗಿರಿ
2024-25ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೆ.21 ರಂದು ಸಂಜೆ 5.30 ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ ಕೋಣೆ ಸಂಖ್ಯೆ ಸಿ-17, ಒಂದನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ ದೂ: 08473 253739, 8105395485ಗೆ ವೆಬ್‌ಸೈಟ್ sevasindhu.karnataka.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.-----