ಸಾರಾಂಶ
ಯಾದಗಿರಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2024ರ ಸಂಬಂಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಪ್ರಾಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
2024ರ ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ರಾಜ್ಯ ಮಟ್ಟದಲ್ಲಿ ಆಚರಿಸುವ ವೇಳೆ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ, ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ, ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿ, ಒಟ್ಟು7 ಪ್ರಶಸ್ತಿ ನೀಡಲು ಇಲಾಖೆ ಅರ್ಜಿ ಆಹ್ವಾನಿಸಿದೆ.ಅರ್ಹ ಅರ್ಜಿದಾರರು, ಸಂಸ್ಥೆಗಳು 2024ರ ಆಗಸ್ಟ್ 31ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯಾದಗಿರಿ ಕಚೇರಿಗೆ ಅರ್ಜಿಸಲ್ಲಿಸಬೇಕು. ನಿಗದಿಪಡಿಸಿದ ದಿನಾಂಕದ ನಂತರ ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.
-------ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ
ಯಾದಗಿರಿ: 2024-25ನೇ ಸಾಲಿನ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಲ್ಲಿ ಸೌಲಭ್ಯಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ವಿವಿಧ ಯೋಜನೆಗಳು ಶೈಕ್ಷಣಿಕ ಸಾಲ ಯೋಜನೆಗಳು ಬಸವ ಬೆಳಗು ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಕಚೇರಿ, ಮಿನಿ ವಿಧಾನಸೌಧ ೨ನೇ ಮಹಡಿ ಸಿ ಬಾಕ್ಲ್ ರೂ.ನಂ.14 ಚಿತ್ತಾಪೂರ ರೋಡ್ ಯಾದಗಿರಿ ಸಂಪರ್ಕಿಸಬಹುದು.---000---