ಅಹವಾಲು ಸಲ್ಲಿಸಲು 18 ರವರೆಗೂ ಅವಕಾಶ: ಡೀಸಿ ಶುಭ ಕಲ್ಯಾಣ್

| Published : Oct 16 2024, 12:50 AM IST

ಅಹವಾಲು ಸಲ್ಲಿಸಲು 18 ರವರೆಗೂ ಅವಕಾಶ: ಡೀಸಿ ಶುಭ ಕಲ್ಯಾಣ್
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅ.19 ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅ. 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ

ಕನ್ನಡಪ್ರಭ ವಾರ್ತೆ, ತುಮಕೂರುಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅ.19 ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅ. 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಡೀಸಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯು ಅ.19ರಂದು ಮಧ್ಯಾಹ್ನ 2.30ಕ್ಕೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು ಅ. 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ನೇರವಾಗಿ ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು. ಸ್ವೀಕೃತ ಅಹವಾಲುಗಳನ್ನು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಸಮಿತಿಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರಲ್ಲದೆ, ಕಳೆದ 2021-22, 2022-23, 2023-24, ಹಾಗೂ 2024 ನೇ ಸೆಪ್ಟೆಂಬರ್ ಮಾಹೆವರೆಗಿನ ಸಮರ್ಪಕ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಿರಬೇಕೆಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ/ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಸೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.