ಓದುವಾಗ ಪಡೆದ ಜ್ಞಾನ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ: ರಂಗನಾಥ ಭಾರದ್ವಾಜ್

| Published : May 28 2024, 01:00 AM IST

ಓದುವಾಗ ಪಡೆದ ಜ್ಞಾನ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ: ರಂಗನಾಥ ಭಾರದ್ವಾಜ್
Share this Article
  • FB
  • TW
  • Linkdin
  • Email

ಸಾರಾಂಶ

ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲ ರಂಗಗಳಲ್ಲಿಯೂ ತಮ್ಮ ಸೇವೆ ಮಾಡುತ್ತಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಿನಿಮಾ ಕ್ರಿಕೆಟ್ ರಂಗದಲ್ಲಿಯೂ ಇದ್ದಾರೆ ಹಾಗೂ ಲೇಖಕರಾಗಿದ್ದಾರೆ ಎಂದು ಹಿರಿಯ ಪತ್ರಕರ್ತ ರಂಗನಾಥ ಎಸ್.ಭಾರದ್ವಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚೈತ್ರ-2024 ಸಮಾರೋಪ- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲ ರಂಗಗಳಲ್ಲಿಯೂ ತಮ್ಮ ಸೇವೆ ಮಾಡುತ್ತಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಿನಿಮಾ ಕ್ರಿಕೆಟ್ ರಂಗದಲ್ಲಿಯೂ ಇದ್ದಾರೆ ಹಾಗೂ ಲೇಖಕರಾಗಿದ್ದಾರೆ ಎಂದು ಹಿರಿಯ ಪತ್ರಕರ್ತ ರಂಗನಾಥ ಎಸ್.ಭಾರದ್ವಾಜ್ ಹೇಳಿದರು.

ನಗರದ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಚೈತ್ರ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಈಗ ದೇಶದಲ್ಲಿ ಪ್ರತಿವರ್ಷ 15 ಲಕ್ಷ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕಾಲೇಜಿನಿಂದ ಹೊರಬರುತ್ತಿದ್ದಾರೆ. ವಿದ್ಯಾರ್ಥಿಗಳು ಓದುವಾಗ ಪಡೆದ ಜ್ಞಾನವನ್ನು ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ರಾಜೇಶ್ವರಿ ಚಟರ್ಜಿ ಅವರು ಭಾರತದ ಮೊದಲ ಮಹಿಳಾ ಎಂಜಿನಿಯರ್ ಆಗಿದ್ದರು. ಮೊದಲ ಮಹಿಳಾ ಸಿವಿಲ್ ಎಂಜಿನಿಯರ್ ಆದ ಶಕುಂತಲಾ ಜೋಶಿ ಅವರನ್ನು 1993ರಲ್ಲಿ ವರ್ಷದ ಎಂಜಿನಿಯರ್ ಎಂದು ಭಾರತ ಸರ್ಕಾರದ ವತಿಯಿಂದ ಸನ್ಮಾನಿಸಲಾಯಿತು. ಅವರು ಭಾರತ ಸೇರಿದಂತೆ ಜರ್ಮನಿ, ಲಂಡನ್, ಅಮೆರಿಕಾ ದೇಶಗಳಲ್ಲಿ ಅನೇಕ ಡ್ಯಾಮ್ ಗಳನ್ನು ನಿರ್ಮಿಸಿದ್ದಾರೆ ಎಂದ ಅವರು, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರ ಸಾಧನೆಗಳನ್ನು ಸ್ಮರಿಸಿದರು ಹಾಗೂ ವಿದ್ಯಾರ್ಥಿಗಳು ಇವರ ಆದರ್ಶಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಚಾರ್ಯ ಡಾ. ಡಿ.ಪಿ. ನಾಗರಾಜಪ್ಪ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧಿಕಾರಿ ಡಾ. ಎಸ್.ಮಂಜಪ್ಪ, ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವಿದ್ಯಾರ್ಥಿನಿ ವಿನುತಾ ಪ್ರಾರ್ಥಿಸಿದರೆ, ದೀಪಾ ಸ್ವಾಗತಿಸಿದರು. ದಿವ್ಯಶ್ರೀ ಚೈತ್ರಾ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ನಾಗಲಕ್ಷ್ಮೀ, ಭರತ್ ಕಾರ್ಯಕ್ರಮ ನಿರೂಪಿಸಿದರು.

- - - -27ಕೆಡಿವಿಜಿ36ಃ:

ದಾವಣಗೆರೆಯ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಚೈತ್ರ- 2024ರ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ರಂಗನಾಥ ಎಸ್. ಭಾರದ್ವಾಜ್ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.