ಮಾಜಿ ಸದಸ್ಯ ಲೋಕೇಶ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಖಾಲಿ ಬಿದ್ದಿರುವ ಆಯುಕ್ತರ ಸ್ಥಾನವನ್ನು ಭರ್ತಿ ಮಾಡಲು ಸಾಧ್ಯವಾಗದವರು ರಾಜ್ಯದ ಆಡಳಿತವನ್ನು ಯಾವ ರೀತಿಯಲ್ಲಿ ಸಮರ್ಥವಾಗಿ ನಿರ್ವಹಿಸುತ್ತಾರೆ ಎಂದು ಪ್ರಶ್ನಿಸಿ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿರಬಹುದು, ಆದರೆ ಅದಕ್ಕೂ ಮೊದಲು ಕನಕಪುರ ಕ್ಷೇತ್ರದ ಶಾಸಕರು ಎಂಬುದನ್ನು ಮರೆಯಬಾರದು. ತಮ್ಮ ಕ್ಷೇತ್ರದ ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಕನಕಪುರ
ನಾವಿಕನಿಲ್ಲದಂತಿರುವ ನಗರಸಭೆಯ ಕಡೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಗಮನ ಹರಿಸಿ ಜನತೆಗೆ ಮೂಲಭೂತ ಸೌಲಭ್ಯ ಹಾಗೂ ಸುಗಮವಾದ ಆಡಳಿತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಆಗ್ರಹಿಸಿದರು.ನಗರದ ಕೋಟೆ ಗಣಪತಿ ದೇವಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಚಿನ್ನಸ್ವಾಮಿ, 31 ವಾರ್ಡ್ ಗಳನ್ನು ಹೊಂದಿರುವ, 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಕನಕಪುರ ನಗರಸಭೆಗೆ ಕಳೆದ ಒಂದೂವರೆ ವರ್ಷ ಗಳಿಂದ ಕಾಯಂ ಆಯುಕ್ತರಿಲ್ಲದಿರುವುದು ನಾಚಿಕೆಯ ಸಂಗತಿಯಾಗಿದ್ದು, ಒಂದಿಬ್ಬರು ಅಧಿಕಾರಿಗಳನ್ನು ನಗರಸಭೆ ಆಯುಕ್ತರನ್ನಾಗಿ ನೇಮಿಸಿದರೂ ಅವರು ಎರಡು, ಮೂರು ತಿಂಗಳು ಮಾತ್ರ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಕಡೆಗೆ ಮುಖ್ಯಮಂತ್ರಿಗಳು ಗಮನ ಹರಿಸಿ 10 ದಿನಗಳೊಳಗೆ ಬಗೆಹರಿಸಿ ಕಾಯಂ ಆಯುಕ್ತರನ್ನು ನೇಮಿಸಬೇಕು. ಇಲ್ಲದಿದ್ದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸೆ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾಜಿ ಸದಸ್ಯ ಲೋಕೇಶ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಖಾಲಿ ಬಿದ್ದಿರುವ ಆಯುಕ್ತರ ಸ್ಥಾನವನ್ನು ಭರ್ತಿ ಮಾಡಲು ಸಾಧ್ಯವಾಗದವರು ರಾಜ್ಯದ ಆಡಳಿತವನ್ನು ಯಾವ ರೀತಿಯಲ್ಲಿ ಸಮರ್ಥವಾಗಿ ನಿರ್ವಹಿಸುತ್ತಾರೆ ಎಂದು ಪ್ರಶ್ನಿಸಿ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿರಬಹುದು, ಆದರೆ ಅದಕ್ಕೂ ಮೊದಲು ಕನಕಪುರ ಕ್ಷೇತ್ರದ ಶಾಸಕರು ಎಂಬುದನ್ನು ಮರೆಯಬಾರದು. ತಮ್ಮ ಕ್ಷೇತ್ರದ ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.ಮಾಜಿ ಸದಸ್ಯ ಸ್ಟೂಡಿಯೋ ಚಂದ್ರು , ಗ್ರಾಪಂ ಮಾಜಿ ಸದಸ್ಯ ಜಯರಾಮೇಗೌಡ ಮಾತನಾಡಿ, ನಗರಸಭೆಯಲ್ಲಿ ಆಯುಕ್ತರಿಲ್ಲದಿರುವುದರಿಂದ ಸಾರ್ವಜನಿಕರ ಕೆಲಸಗಳು ಸ್ಥಗಿತಗೊಂಡು ಪರದಾಡುವ ಸನ್ನಿವೇಶ ನಿರ್ಮಾಣವಾಗಿದೆ ಎಂದು ದೂರಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಕಬ್ಬಾಳೇಗೌಡ, ಮುಖಂಡರಾದ ಸಿದ್ದಮರೀಗೌಡ, ತಿಮ್ಮೇಗೌಡ, ತಾಲೂಕು ಮಹಿಳಾ ಅಧ್ಯಕ್ಷೆ ಪವಿತ್ರ, ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಸ್ಟುಡಿಯೋ ಸಿದ್ದು, ಜೆಡಿಎಸ್ ನಗರ ಕಾರ್ಯಾಧ್ಯಕ್ಷ ಸುರೇಶ್, ಇಕ್ಬಾಲ್, ಯಶೋದ, ಸಿದ್ಧು , ಅರಳಾಳು ರಾಜೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.