ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ

| Published : Feb 19 2025, 12:47 AM IST

ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕೆ.ಎನ್.ರಾಜಣ್ಣ ಅವರು, ನೇರ ನಡೆ ನುಡಿಯ ಸರಳ ವ್ಯಕ್ತಿತ್ವವುಳ್ಳವರು. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷದ ಹಿತದೃಷ್ಠಿಯಿಂದ ಒಳಿತಾಗುತ್ತದೆ.

ಕನ್ನಡಪ್ರಭ ವಾರ್ತೆ ಮಧುಗಿರಿ

ರಾಜ್ಯದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಕೆಪಿಸಿಸಿ ಸದಸ್ಯ ಸಿದ್ದಾಪುರ ರಂಗಶ್ಯಾಮಯ್ಯ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಕನ್ನಡಪ್ರಭ ಜೊತೆ ಮಾತನಾಡಿದ ಅವರು, ನಮ್ಮ ಸಚಿವರಾದ ಕೆ.ಎನ್.ರಾಜಣ್ಣ ಅವರು, ನೇರ ನಡೆ ನುಡಿಯ ಸರಳ ವ್ಯಕ್ತಿತ್ವವುಳ್ಳವರು. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷದ ಹಿತದೃಷ್ಠಿಯಿಂದ ಒಳಿತಾಗುತ್ತದೆ. ಅಲ್ಲದೆ ತುಮಕೂರು ಜಿಲ್ಲೆಗೆ ಹೆಚ್ಚು ಮಹತ್ವ ಬರುವ ಜೊತೆಗೆ ಮುಂದಿನ ಸ್ಥಳೀಯ ಚುನಾವಣೆ ಮತ್ತು 2028ರ ಆಸೆಂಬ್ಲಿ ಚುನಾವಣೆಗೆ ಇಡೀ ರಾಜ್ಯಾದಾದ್ಯಂತ ಪಕ್ಷವನ್ನು ಸದೃಡವಾಗಿ ಕಟ್ಟಲು ಸಹಕಾರಿಯಾಗುತ್ತದೆ ಎಂದರು.

ಸಚಿವ ಕೆ.ಎನ್‌.ರಾಜಣ್ಣ ಕಾಂಗ್ರೆಸ್‌ ಪಕ್ಷದ ಕಟ್ಟಾಳು, ರಾಜ್ಯ ಹಾಗೂ ಜಿಲ್ಲೆಯಲ್ಲಿ ಹಲವು ಹುದ್ದೆಗಳನ್ನು ಅನುಭವಿಸಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದ್ದಾರೆ. ಕೆಪಿಸಿಸಿ ಕಮಿಟಿಯಲ್ಲಿ ಈಗಾಗಲೇ ಪಕ್ಷ ಸೂಚಿಸಿರುವ ತತ್ವ ಸಿದ್ಧಾಂತಗಳಡಿ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾದರೆ ಕಾಂಗ್ರೆಸ್‌ ಪಕ್ಷವನ್ನು ಮತ್ತಷ್ಠು ಬಲಗೊಳಿಸಬಹುದು. ದಲಿತ ಸಮುದಾಯಕ್ಕೆ ಸೇರಿದ ಕೆ.ಎನ್.ರಾಜಣ್ಣ ಕೆ.ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದರು.

ಕಾಂಗ್ರೆಸ್‌ ಪಕ್ಷದ ಸಿದ್ದಾಂತದಡಿ ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ಸಿದ್ದಾಂತಕ್ಕೆ ಬದ್ಧರಾಗಿ ಕಳೆದ ಆಸೆಂಬ್ಲಿ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ಕೆ.ಎನ್‌.ರಾಜಣ್ಣ ಅವರ ಪರಿಶ್ರಮ ಅಡಗಿದ್ದು ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಸಮರ್ಥ ನಾಯಕ ರಾಜಣ್ಣ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಮತ್ತಿತರೆ ಸಚಿವರು, ಶಾಸಕರುಗಳ ಸಹಕಾರದಿಂದ ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಿಕ್ಕೆ ತರಲು ಅವರು ಶ್ರಮ ವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಇನ್ನೂ ಜಿಲ್ಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ದೆಹಲಿ ವಿಶೇಷ ಪ್ರತನಿಧಿ ಟಿ.ಬಿ.ಜಯಚಂದ್ರ ಹಾಗೂ ಇನ್ನಿತರೆ ಕಾಂಗ್ರೆಸ್‌ ಶಾಸಕರು ಜೊತೆಯಲ್ಲಿ ಉತ್ತಮ ಭಾಂದವ್ಯ ಹೊಂದಿರುವುದಲ್ಲದೆ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವಿದ್ದು, ಅಲ್ಲದೆ ಅವರು ಮಾಡುವ ಜನಪರ ಕಾರ್ಯಗಳು ಜನ ಮೆಚ್ಚುಗೆ ಪಡೆದಿದ್ದು ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದಲ್ಲಿ ತುಮಕೂರು ಜಿಲ್ಲೆಗೂ ಪಾಧಾನ್ಯತೆ ನೀಡಿಂತಾಗುವುದು. ಆದ್ದರಿಂದ ಸರ್ವರಿಗೂ ಸಮಬಾಳು ಸಮಪಾಲು ಎಂಬಂತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಭರವಸೆ ನಮಗಿದೆ. ಆದ ಕಾರಣ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಕೆಪಿಸಿಸಿ ಸದಸ್ಯ ಸಿದ್ದಾಪುರ ರಂಗಶ್ಯಾಮಣ್ಣ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದರು.