ಸಾರಾಂಶ
Appointed to Nagar Block Congress
ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರೇಣುಕ ಶಿವು ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ರೇಣುಕಶಿವು ಅವರಿಗೆ ನೇಮಕಾತಿ ಪತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಅವರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಸಂಘಟಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಕೆಲಸ ಮಾಡುವಂತೆ ಸೂಚಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಅಬ್ದುಲ್ಲಾ, ಸೈಯದ್ ಅಲ್ಲಾಭಕ್ಷಿ ಹಾಜರಿದ್ದರು.
-----ಫೋಟೋ: 6 ಸಿಟಿಡಿ 2
;Resize=(128,128))
;Resize=(128,128))
;Resize=(128,128))
;Resize=(128,128))