ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಜಿಪಂ ಮಾಜಿ ಅಧ್ಯಕ್ಷ ಬಸವರಾಜು ನೇತೃತ್ವದ 15 ಸದಸ್ಯರ ತಂಡ ಶುಕ್ರವಾರ ಅಧಿಕಾರ ಸ್ವೀಕರಿಸಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಕೆ.ಎಂ.ಉದಯ್ ಯೋಜನೆಗಳ ಅನುಷ್ಠಾನ ಸಮಿತಿ ಆದೇಶ ಪ್ರತಿಯನ್ನು ಅಧ್ಯಕ್ಷ ಬಸವರಾಜು ಅವರಿಗೆ ಹಸ್ತಾಂತರ ಮಾಡುವ ಮೂಲಕ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ ಭರವಸೆಯಂತೆ ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜೋತಿ ಮತ್ತು ಯುವ ನಿಧಿ ಯೋಜನೆಗಳನ್ನು ಕುರಿತು ತಾಲೂಕು ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದು, ಸಮಿತಿಯಲ್ಲಿ ಅಧ್ಯಕ್ಷರು ಸೇರಿದಂತೆ 16 ಮಂದಿನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದರು.ಸದಸ್ಯರಾಗಿ ಎಸ್. ರಾಜಣ್ಣ, ಭಾನುಪ್ರಕಾಶ್, ಗೀತಾ, ನಾಗಮ್ಮ, ಎಂ.ಬಿ.ರಾಜು, ಬಿ.ಎಚ್.ವೆಂಕಟೇಶ್, ಕೆ.ಎಂ.ಕಿರಣ್, ಬೋರೇಗೌಡ, ಸಿದ್ದಲಿಂಗ ಪ್ರಸಾದ್, ವಿಜಯಕುಮಾರ್, ಮನು ಕುಮಾರ್, ಫೈರೋಜ್ ಖಾನ್, ವಿ. ರಘುಪತಿ, ಮಹೇಂದ್ರ ಕುಮಾರ್ ಹಾಗೂ ತಾಪಂ ಇಒ ರಾಮಲಿಂಗಯ್ಯ ಅವರು ಸದಸ್ಯರಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು.
ಬಳಿಕ ಸಮಿತಿ ನೂತನ ಕಚೇರಿ ಉದ್ಘಾಟಿಸಿ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು.ಮಾಜಿ ಸಂಸದ ದಿ.ಜಿ.ಮಾದೇಗೌಡರ ರಾಜಕಾರಣದ ಅಧಿಕಾರ ಅವಧಿಯಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜು ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಪ್ರಾಮಾಣಿಕತೆ ಗೆ ಮೆಚ್ಚಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ಬಸವರಾಜು ಅವರನ್ನು ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದರು.
ಗ್ಯಾರೆಂಟಿ ಯೋಜನೆಗಳಲ್ಲಿ ತಮಗೆ ಸ್ಥಾನಮಾನ ದೊರಕಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಕೆಲವು ಅಸಮಾಧಾನಗಳು ಇರುವುದು ನನ್ನ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಅವಕಾಶ ದೊರೆಯುತ್ತದೆ ಎಂಬ ವಿಶ್ವಾಸದಿಂದ ಕಾರ್ಯಕರ್ತರು ಇರಬೇಕ ಎಂದರು.ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕ್ಷೇತ್ರ ಜನರಿಗೆ ಗ್ಯಾರೆಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸನ್ನದರಾಗಬೇಕು ಎಂದರು.
ಈ ವೇಳೆ ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಭಾರತಿ ನಗರ ಬ್ಲಾಕ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭೆ ಅಧ್ಯಕ್ಷ ಕೋಕಿಲ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ತಾಪಂ ಇಒ ರಾಮಲಿಂಗಯ್ಯ, ಸಹಾಯಕ ನಿರ್ದೇಶಕ ಮಂಜುನಾಥ್ ಇದ್ದರು.