ಪಾಠ್ ಶಾಲಾ ಜೀವನ್ ಯಾತ್ರಾ ಪುಸ್ತಕಕ್ಕೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ

| Published : Nov 26 2024, 12:45 AM IST

ಪಾಠ್ ಶಾಲಾ ಜೀವನ್ ಯಾತ್ರಾ ಪುಸ್ತಕಕ್ಕೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಲೆಯ ನಾಲ್ಕರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು- ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ.

ಕನ್ನಡಪ್ರಭ ವಾರ್ತೆ ಮೈಸೂರುಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಗರದ ಪೂರ್ಣ ಚೇತನ ಶಾಲೆಯ ಮಕ್ಕಳೇ ಬರೆದು, ಸಂಪಾದಿಸಿ, ಪ್ರಕಟಿಸಿರುವ ಪಾಠ್ ಶಾಲಾ- ಜೀವನ್ ಯಾತ್ರಾ ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅವರನ್ನು ಅಭಿನಂದಿಸಿದ್ದಾರೆ.ಶಾಲೆಯ ಸಿಇಒ ಬಿ. ದರ್ಶನ್ ರಾಜ್ ಹಾಗು ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಅವರು ಇತ್ತೀಚಿಗೆ ಸಚಿವರನ್ನು ಅವರ ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ಈ ಪುಸ್ತಕವನ್ನು ಅವರಿಗೆ ಅರ್ಪಿಸಿದರು. ಈ ವೇಳೆ ಸಚಿವರು ಮಕ್ಕಳ ಕ್ರಿಯಾಶೀಲತೆ ಹಾಗೂ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲೆಯ ನಾಲ್ಕರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು- ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ.