ವಿಜ್ಞಾನಿ ಸಿ.ವಿ. ರಾಮನ್ ಅವರ ಸ್ಮರಣಾರ್ಥ ಆಚರಿಸಲಾಗುವ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹೆಂಜಗೋಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಯಸ್ಸಿಗೆ ಮೀರಿದ ಸಾಮರ್ಥ್ಯ ಪ್ರದರ್ಶಿಸಿ, ವಿವಿಧ ವಿಜ್ಞಾನ ಮಾದರಿಗಳ ಮೂಲಕ ಸಮರ್ಥವಾಗಿ ವಿವರಣೆ ನೀಡಿರುವುದು ಶ್ಲಾಘನೀಯವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ವಿಜ್ಞಾನ ವಸ್ತು ಪ್ರದರ್ಶನವು ಮಕ್ಕಳ ಜ್ಞಾನಾರ್ಜನೆಗೆ ಮಹತ್ವದ ವೇದಿಕೆಯಾಗುತ್ತದೆ ಎಂದು ಬಿ.ಆರ್.ಪಿ. ಸಿದ್ದರಾಮಪ್ಪ ಅಭಿಪ್ರಾಯಪಟ್ಟರು.ವಿಜ್ಞಾನಿ ಸಿ.ವಿ. ರಾಮನ್ ಅವರ ಸ್ಮರಣಾರ್ಥ ಆಚರಿಸಲಾಗುವ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹೆಂಜಗೋಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಯಸ್ಸಿಗೆ ಮೀರಿದ ಸಾಮರ್ಥ್ಯ ಪ್ರದರ್ಶಿಸಿ, ವಿವಿಧ ವಿಜ್ಞಾನ ಮಾದರಿಗಳ ಮೂಲಕ ಸಮರ್ಥವಾಗಿ ವಿವರಣೆ ನೀಡಿರುವುದು ಶ್ಲಾಘನೀಯವಾಗಿದೆ ಎಂದರು.
ಕೆಲ ಶಾಲೆಗಳಲ್ಲಿ ವಿಜ್ಞಾನ ದಿನಾಚರಣೆ ನಡೆಯದೇ ಇರುವುದನ್ನು ಉಲ್ಲೇಖಿಸಿ, ಇಂತಹ ವಿಶೇಷ ಕಾರ್ಯಕ್ರಮಗಳು ನಿಯಮಿತ ಬೋಧನೆಯ ಜೊತೆಗೆ ವಿದ್ಯಾರ್ಥಿಗಳ ಜ್ಞಾನ ವಿಕಾಸಕ್ಕೆ ಪೂರಕವಾಗುತ್ತವೆ ಎಂದು ತಿಳಿಸಿದರು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿರುವುದು ಸಂತೋಷದ ವಿಚಾರ ಎಂದರು.ಪೋಷಕರಾದ ಭಾರತಿ ಹಾಗೂ ಜ್ಯೋತಿ ಅವರುಗಳು ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದರಿಂದ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಯನ್ನೇ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಮಾತನಾಡಿ, ಶಾಲೆಯಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣದ ಫಲವಾಗಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚುತ್ತಿದೆ. ಪೋಷಕರ ಸಹಕಾರ ಮತ್ತು ವಿಶ್ವಾಸವೇ ಶಾಲೆಯ ಶಕ್ತಿಯಾಗಿದೆ ಎಂದರು.ವಿದ್ಯಾರ್ಥಿಗಳು ಪ್ರದರ್ಶಿಸಿದ ಗಾಳಿಯ ಒತ್ತಡ, ತಾಮ್ರದ ಪಾತ್ರೆಯ ಬಳಕೆ ಮತ್ತು ಅದರ ಮಹತ್ವ, ತರಕಾರಿಗಳಲ್ಲಿನ ವಿಟಮಿನ್‌ಗಳ ಕುರಿತು ಮಾಡಲಾದ ಮಾದರಿ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು.