ಸಾರಾಂಶ
ಡೆಂಘೀ ಜ್ವರ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಸಹಕಾರ ಪಡೆದು ಸಮರದ ರೀತಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ತಿಳಿಸಿದರು. ಕುದೂರಿನಲ್ಲಿ ಹಮ್ಮಿಕೊಂಡ ಡೆಂಘೀ ಸೊಳ್ಳೆ ನಿಯಂತ್ರಣ ಸಭೆಯಲ್ಲಿ ಮಾತನಾಡಿದರು. 
ಕುದೂರು: ಡೆಂಘೀ ಜ್ವರ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಸಹಕಾರ ಪಡೆದು ಸಮರದ ರೀತಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ತಿಳಿಸಿದರು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಡೆಂಘೀ ಜ್ವರ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗ್ರತೆ ಕ್ರಮವಾಗಿ ಪಂಚಾಯ್ತಿ ನೌಕರರು ಹಾಗೂ ಆರೋಗ್ಯ ಇಲಾಖೆಯ ನೌಕರರು ಹಾಗೂ ಆಶಾಕಾರ್ಯಕರ್ತೆಯರ ಸಭೆಯಲ್ಲಿ ಅವರು ಮಾತನಾಡಿದರು.ಗ್ರಾಮದ ಬೀದಿಗಳಿಗೆ ಫಾಗಿಂಗ್ ವ್ಯವಸ್ಥೆ ಹಾಗೂ ಚರಂಡಿಗಳ ಸ್ವಚ್ಛ ತೆ ಕುರಿತು ಪಂಚಾಯ್ತಿ ನೌಕರರು ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಕೂಡಾ ಸ್ವಚ್ಛತೆಯ ಕಡೆಗೆ ಗಮನ ಹರಿಸಿ ಮನೆಯ ಮುಂದೆ ಹಾಗೂ ನೀರಿನ ಟ್ಯಾಂಕ್‌ಗಳಲ್ಲಿ, ತೊಟ್ಟಿಗಳಲ್ಲಿ ಸೊಳ್ಳೆಗಳ ವಾಸಸ್ಥಾನವಾಗದಂತೆ ನೋಡಿಕೊಂಡು, ಸೊಳ್ಳೆ ಕಡಿತದಿಂದ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕುಸುಮಾ ಹೊನ್ನರಾಜು ಮಾತನಾಡಿ, ಕುದೂರು ಗ್ರಾಮ ದಿನೇ ದಿನೇ ದೊಡ್ಡದಾಗಿ ಬೆಳೆಯುತ್ತಿದೆ. ಅದರಂತೆ ಸಮಸ್ಯೆಗಳು ಹೆಚ್ಚಾಗುತ್ತಿವೆ, ಪಂಚಾಯ್ತಿಯವರು ಮೊದಲು ಜನರಿಗೆ ಮೂಲಭೂತ ಸವಲತ್ತುಗಳನ್ನು ಕೊಡುವುದರ ಜೊತೆಗೆ ಗ್ರಾಮದ ಸ್ಚಚ್ಛತೆಗೆ ಹೆಚ್ಚು ಆದ್ಯತೆ ನೀಡುತ್ತೇವೆ. ನಮ್ಮೊಂದಿಗೆ ಗ್ರಾಮಸ್ಥರು ಕೂಡಾ ಕೈ ಜೋಡಿಸಿ ಗ್ರಾಮದಲ್ಲಿ ಡೆಂಘೀ ಜ್ಚರ ಬರದಂತೆ ತಡೆಯುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ವೆಂಕಟೇಶ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))