ಸಾರಾಂಶ
ಹನೂರು ಪಟ್ಟಣದ ಉಪ ನೋಂದಣಿ ಕಚೇರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು ..
ಕನ್ನಡಪ್ರಭ ವಾರ್ತೆ ಹನೂರು
ಹನೂರು ಪಟ್ಟಣದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಸೋಮವಾರ ಶಾಸಕ ಎಂ.ಆರ್. ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ನೋಂದಣಾಧಿಕಾರಿ ಬಳಿ ಮಾಹಿತಿಯನ್ನು ಪಡೆದುಕೊಂಡರು.ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ನೋಂದಣಿ ಮಾಡಲು ವಿಳಂಬ ಮಾಡುತ್ತಿರುವುದು ಕಂಡುಬಂದಿದ್ದು, ನಕಲಿ ದಾಖಲೆಗಳ ಪರಿಶೀಲನೆ ಮಾಡಿ ನೋಂದಣಿ ಮಾಡತಕ್ಕದ್ದು. ಜೊತೆಗೆ ಕಚೇರಿಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಯ ಸಿಬ್ಬಂದಿ ವರ್ಗದವರು ನಿಗದಿತ ಸಮಯದಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿ ವಿವರ ಜೊತೆಗೆ ಇಲ್ಲಿನ ನಿರ್ವಹಣೆಯನ್ನು ಮಾಡುವುದರಿಂದ ಇಲ್ಲಿನ ಸಿಬ್ಬಂದಿ ವರ್ಗ ರೈತರಿಗೆ ಬೇಕಾಗಿರುವ ಇಸಿ ಹಾಗೂ ಇನ್ನಿತರ ದಾಖಲಾತಿಗಳನ್ನು ನೀಡಲು ವಿಳಂಬ ಮಾಡದೆ ನಿಗದಿತ ಸಮಯದಲ್ಲಿ ಅನುಕೂಲ ಕಲ್ಪಿಸುವಂತೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಬರುವಾಗ ಅವರಿಗೆ ಅಧಿಕಾರಿ ಸಿಬ್ಬಂದಿ ವರ್ಗ ಸ್ಪಂದಿಸುವ ಮೂಲಕ ಕೆಲಸ ಮಾಡಿಕೊಡಿ ಎಂದು ಸೂಚನೆ ನೀಡಿದರು
ನೋಂದಣಿ ಕಚೇರಿಗೆ ಬರುವವರ ಕಡುಬಡವರು ರೈತರು ಹಾಗೂ ಇನ್ನಿತರ ಆಸ್ತಿಪಾಸ್ತಿ ನೋಂದಣಿ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಜೊತೆಗೆ ಇಲ್ಲಿನ ಕೆಲಸ ಕಾರ್ಯಗಳ ಬಗ್ಗೆ ಸಾಕಷ್ಟು ದೂರುಗಳು ಸಹ ದಿನದಿಂದ ದಿನಕ್ಕೆ ಹೆಚ್ಚಾಗಿ ಬರುತ್ತಿದೆ. ಹೀಗಾಗಿ ಮುಂದೆ ಇಂತಹ ದೂರುಗಳು ಬರದಂತೆ ಅಚ್ಚುಕಟ್ಟಾಗಿ ಕೆಲಸವನ್ನು ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಮಾಡಿಕೊಡುವ ನಿಟ್ಟಿನಲ್ಲಿ ಅಧಿಕಾರಿ ಸಿಬ್ಬಂದಿ ವರ್ಗದವರು ಗಮನ ಹರಿಸಬೇಕು ಮತ್ತೆ ದೂರುಗಳು ಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಮುಖಂಡರಾದ ಮಂಜೇಶ್ ಗೌಡ, ಗೋಪಾಲ್ ನಾಯಕ,ಎಸ್ .ಆರ್ ಮಹಾದೇವ್, ವೆಂಕಟೇಶ್, ನಟರಾಜು ಇನ್ನಿತರರಿದ್ದರು.