ಸಾರಾಂಶ
ಸಮ್ಮೇಳನದ ಸಿದ್ಧತಾ ಕಾರ್ಯವನ್ನು ಜಿಲ್ಲಾಧಿಕಾರಿಗಳು ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ.
ಕನ್ನಡಪ್ರಭ ವಾರ್ತೆ ಮಂಡ್ಯ
ಕನ್ನಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಮಾರು ಒಂದರಿಂದ ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.ನಗರದ ಹೊರವಲಯದ ಸಾಂಜೋ ಆಸ್ಪತ್ರೆ ಹಿಂಭಾಗ ನಿರ್ಮಾಣವಾಗುತ್ತಿರುವ ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣದ ಸಿದ್ಧತೆ ವೀಕ್ಷಿಸಿ ಮಾತನಾಡಿದ ಅವರು, ಸಮ್ಮೇಳನದ ಸಿದ್ಧತಾ ಕಾರ್ಯವನ್ನು ಜಿಲ್ಲಾಧಿಕಾರಿಗಳು ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಮುಂದಿನ ಮಂಗಳವಾರ ಅಥವಾ ಬುಧವಾರದೊಳಗೆ ವೇದಿಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ನಾಳೆಯಿಂದ ನಾನು ಸಹ ಸಂಪೂರ್ಣವಾಗಿ ವೇದಿಕೆ ನಿರ್ಮಾಣದ ಸ್ಥಳದಲ್ಲಿ ಇದ್ದು ವೇದಿಕೆ ಕಾರ್ಯಗಳನ್ನು ವೀಕ್ಷಿಸಲಿದ್ದೇನೆ ಎಂದರು.ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು. ಸಮ್ಮೇಳನದಲ್ಲಿ ಗೋಷ್ಠಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಕೃಷಿ, ಸಾಹಿತ್ಯ, ಸಂಸ್ಕೃತಿಕ ಇನ್ನೂ ಅನೇಕ ವಿಚಾರಗಳ ಗೋಷ್ಠಿಗಳು ನಡೆಯಲಿವೆ ಎಂದರು.
ಈ ವೇಳೆ ಶಾಸಕರಾದ ರವಿಕುಮಾರ್, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.ಇಂದು ಗುರುವಂದನೆ, ಹಿರಿಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ
ಮಂಡ್ಯ: ತಾಲೂಕಿನ ಸೂನಗಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿ.15 ರಂದು ಗುರುವಂದನೆ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಸೂಗನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಈ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಮುಖಂಡರು, ಹಿರಿಯರು ಭಾಗವಹಿಸುವಂತೆ ಹಿರಿಯ ವಿದ್ಯಾರ್ಥಿಗಳು ಕೋರಿದ್ದಾರೆ.