ನೀರು ಮಲಿನಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕುಃ ಡಾ.ಅಂಶುಮಂತ್

| Published : May 15 2025, 01:36 AM IST

ನೀರು ಮಲಿನಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕುಃ ಡಾ.ಅಂಶುಮಂತ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆಭದ್ರಾ ಜಲಾಶಯದ ಕೆಳಭಾಗದ ಮೀನಿನ ಕೊಳಗಳ ತ್ರಾಜ್ಯವನ್ನು ಭದ್ರಾ ನದಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಮಲಿನ ಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಅಳವಡಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತರೀಕೆರೆ

ಭದ್ರಾ ಜಲಾಶಯದ ಕೆಳಭಾಗದ ಮೀನಿನ ಕೊಳಗಳ ತ್ರಾಜ್ಯವನ್ನು ಭದ್ರಾ ನದಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಮಲಿನ ಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಅಳವಡಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಸೂಚಿಸಿದ್ದಾರೆ. ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇದೊಂದು ಗಂಭೀರ ಸಮಸ್ಯೆಯಾಗಿದ್ದು ಈ ಸಮಸ್ಯೆಯಿಂದ ಆರೋಗ್ಯಕ್ಕೆ ಹಾನಿಯಾಗುವ ಕಾರಣ ಸಭೆಯಿಂದಲೇ ಕರ್ನಾಟಕ ನೀರಾವರಿ ನಿಗಮ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಫೋನಿನ ಮೂಲಕ ಮಾತನಾಡಿ ಮಲಿನ ಗೊಂಡಿರುವ ಕುಡಿಯುವ ನೀರು ಸರಬರಾಜು ತಡೆಯಲು ಬಿ.ಆರ್. ಪ್ರಾಜೆಕ್ಟ್ ನ ಮೀನುಗಾರಿಕೆ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರಿಗೆ ಈ ಗಂಭೀರ ಸಮಸ್ಯೆ ಬಗೆಹರಿಸಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲು ಸಲಹೆ ನೀಡಿ, ಗುಣಮಟ್ಟದ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಸಭೆಗೆ ಆಗಮಿಸಿದ ಶಾಸಕ ಜಿ.ಎಚ್. ಶ್ರೀನಿವಾಸ್ ಗೆ ಡಾ.ಅಂಶುಮಂತ್ ಅವರು ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ಶಾಸಕರಿಗೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ (ಎಸ್.ಸಿ) ಮಾದ್ಯಮ ವಕ್ತಾರ ಎಲ್.ಟಿ.ಹೇಮಣ್ಣ ಮಾತನಾಡಿ ಹಲವಾರು ವರ್ಷಗಳಿಂದ ಭದ್ರಾ ಜಲಾಶಯದ ಕೆಳಭಾಗದಲ್ಲಿ ಬರುವ ಮೀನು ಮರಿ ಉತ್ಪಾದನಾ ಕೇಂದ್ರದಿಂದ ಮೀನಿನ ಕೊಳಗಳ ತ್ಯಾಜ್ಯ ಭದ್ರಾ ನದಿಗೆ ಬಿಡಲಾಗುತ್ತಿದೆ. ಇದರಿಂದ ಭದ್ರಾ ನದಿ ಮಲೀನವಾಗುತ್ತಿದೆ. ಈ ನದಿಯಿಂದ ಲಕ್ಕವಳ್ಳಿ, ಕುವೆಂಪು ವಿಶ್ವವಿದ್ಯಾಲಯ, ಸಿಂಗನ ಮನೆ, ತರೀಕೆರೆ ,ಕಡೂರು ಹಾಗೂ ಹೊಸದಾಗಿ ಹೊಸದುರ್ಗ ಪಟ್ಟಣಗೆ ಪಟ್ಟಣಗಳಿಗೆ ಕುಡಿಯುವ ನೀರಿನ ಯೋಜನೆ ಕಾಮಗಾರಿ ನಡೆಯುತ್ತಿದ್ದು ಈ ಮೂಲಕ ಭದ್ರಾ ನದಿಯಿಂದ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಈ ವಿಚಾರದಲ್ಲಿ ಅಧಿಕಾರಿಗಳಿಂದ ಹಾಗೂ ಸಾರ್ವಜನಿಕರಿಂದ ಅನೇಕ ಆಕ್ಷೇಪಣೆ ಮತ್ತು ಪ್ರತಿಭಟನೆ ಮಾಡಿದ್ದರೂ ಈವರೆಗೂ ಯಾವುದೇ ಕ್ರಮಗಳು ತೆಗೆದುಕೊಂಡಿಲ್ಲ ಎಂದು ಕಾಡಾ ಅಧ್ಯಕ್ಷರಿಗೆ ಮನವರಿಕೆ ಮಾಡಿದರು.

ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಶಿವಾನಂದ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಲಾಡ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಆದಿಲ್, ಕೆಪಿಸಿಸಿ ಸದಸ್ಯರಾದ ಎಚ್ ವಿಶ್ವನಾಥ್, ಜಿಲ್ಲಾ ಕೆಡಿಪಿ ಸದಸ್ಯರಾದ ಸಿರಾಜ್, ಮುಖಂಡರಾದ ಎ.ವಿ. ವೆಂಕಟರಮಣ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅನ್ಭು, ಲಕ್ಕವಳ್ಳಿ ನೀರು ಬಳಕೆ ಅಧ್ಯಕ್ಷ ಹರಿ, ಅನೀಫ್ , ಶಿವಕುಮಾರ್, ವೆಂಕಟೇಶ್, ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

14ಕೆಟಿಆರ್.ಕೆ.6ಃ

ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಲಕ್ಕವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಮಾತನಾಡಿದರು. ಶಾಸಕ ಜಿ.ಎಚ್.ಶ್ರೀನಿವಾಸ್, ಕೆಪಿಸಿಸಿ ಸದಸ್ಯ ಎಚ್.ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್,ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಎಸ್.ಸಿ) ಮಾದ್ಯಮ ವಕ್ತಾರ ಎಲ್.ಟಿ.ಹೇಮಣ್ಣ ಮತ್ತಿತರರು ಇದ್ದಾರೆ.