ಅಪ್ಪು ಸೇವಾ ಕಾರ್ಯ ಸಮಾಜಕ್ಕೆ ಮಾದರಿ

| Published : Oct 30 2024, 12:46 AM IST

ಸಾರಾಂಶ

ಕರ್ನಾಟಕ ರತ್ನ, ನಟ, ಸಮಾಜ ಸೇವಕ ದಿವಂಗತ ಪುನೀತ್‌ರಾಜ್‌ಕುಮಾರ್ ಸಮಾಜಕ್ಕೆ ಮಾದರಿಯಾಗಿದ್ದು, ಅವರ ಸೇವಾ ಕಾರ್ಯಗಳನ್ನು ನಾವೂ ಸಹ ಮೈಗೂಡಿಸಿಕೊಳ್ಳಬೇಕೆಂದು ಯುವ ಮುಖಂಡ ಬಿ.ಎಸ್ ಗಣೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ : ಕರ್ನಾಟಕ ರತ್ನ, ನಟ, ಸಮಾಜ ಸೇವಕ ದಿವಂಗತ ಪುನೀತ್‌ರಾಜ್‌ಕುಮಾರ್ ಸಮಾಜಕ್ಕೆ ಮಾದರಿಯಾಗಿದ್ದು, ಅವರ ಸೇವಾ ಕಾರ್ಯಗಳನ್ನು ನಾವೂ ಸಹ ಮೈಗೂಡಿಸಿಕೊಳ್ಳಬೇಕೆಂದು ಯುವ ಮುಖಂಡ ಬಿ.ಎಸ್ ಗಣೇಶ್ ಹೇಳಿದರು.

ಅವರು ಮಂಗಳವಾರ ತಾಲೂಕು ಕಚೇರಿ ರಸ್ತೆ, ತಾಲೂಕು ಪಂಚಾಯಿತಿ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪುನೀತ್‌ ರಾಜ್‌ಕುಮಾರ್‌ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಭೂಮಿ ಮೇಲೆ ಮನುಷ್ಯ ಜನ್ಮ ಶ್ರೇಷ್ಠವಾಗಿದ್ದು, ನಮ್ಮ ಜನ್ಮ ಸಾರ್ಥಕವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು. ಸ್ಥಳೀಯ ಮುಖಂಡರಾದ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಡಿಎಸ್‌ಎಸ್ ಮುಖಂಡ ಪುಟ್ಟರಾಜ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್, ತಾಲೂಕು ಕುರುಬರ ಸಂಘದ ನಿರ್ದೇಶಕ ಮಂಜುನಾಥ್ ಕೊಯ್ಲಿ, ಕುಮಾರ್(ಮಾಸ್ಟರ್) ಹಾಗು ಆಟೋ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಆಟೋ ಚಾಲಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪುಣ್ಯಸ್ಮರಣೆ ಅಂಗವಾಗಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಿ.ಎಸ್ ಗಣೇಶ್, ಆರ್. ಮಹೇಶ್ ಕುಮಾರ್ ಚಾಲನೆ ನೀಡಿದರು.