ಸಾರಾಂಶ
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಮೂಡಲಗಿ
ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವಿರೋಧವಾಗಿ ಆಯ್ಕೆಯಾದರು.ಪಪಂ ಸಭಾಭವನದಲ್ಲಿ ಶುಕ್ರವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು.
ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದವು. ಉಭಯ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ಮೂಡಲಗಿ ತಹಸೀಲ್ದಾರ ಡಾ.ಮಹಾದೇವ ಸನಮುರಿ ಘೋಷಿಸಿದರು.ಎಲ್ಲ16 ಜನ ಸದಸ್ಯರು ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡಿದ್ದು, ಅವರ ಸೂಚನೆಯಂತೆ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿರುವುದು ಬಾಲಚಂದ್ರ ಜಾರಕಿಹೊಳಿ ಪ್ರಭಾವಕ್ಕೆ ಮತ್ತಷ್ಟು ಗಟ್ಟಿಯಾಗಿದೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರನ್ನು ಚುನಾವಣಾಧಿಕಾರಿ ಮಹಾದೇವ ಸನಮುರಿ ಹೂಗುಚ್ಚ ನೀಡಿ ಅಭಿನಂದಿಸಿದರು. ಸ್ಥಳೀಯ ಮುಖಂಡರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಿಕ ಮತ್ತು ಸಿ.ಪಿ. ಯಕ್ಷಂಬಿ ಉಪಸ್ಥಿತರಿದ್ದರು.ಅರಭಾವಿ ಪಟ್ಟಣ ಪಂಚಾಯತಿಗೆ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ರೇಣುಕಾ ಮಾದರ ಮತ್ತು ರಾಜಶ್ರೀ ಗಂಗಣ್ಣವರಗೆ ಅಭಿನಂದಿಸುತ್ತೇನೆ. ಸದಸ್ಯರು ಮತ್ತು ಹಿರಿಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು. ನಾಗರಿಕರ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು. ಪಕ್ಷ ಭೇದ ಮರೆತು ಅಭಿವೃದ್ಧಿಗೆ ದುಡಿಯಬೇಕು.ಪಟ್ಟಣದ ಪ್ರಗತಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡುವೆ. ಪ್ರಗತಿಯ ಕಾರ್ಯಗಳಿಗೆ ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು.- ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಭಾವಿ ಕ್ಷೇತ್ರ