ಮೀಸಲಾತಿ ಆಗ್ರಹಿಸಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆ

| Published : Feb 17 2024, 01:16 AM IST

ಮೀಸಲಾತಿ ಆಗ್ರಹಿಸಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಕರ್ನಾಟಕ ಅರಣ್ಯ ಪದವೀಧರರು ಮತ್ತು ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ.ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದರು.

ಇದೇ ಸಂದರ್ಭ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಅರಣ್ಯ ಶಿಕ್ಷಣದ ಮಹತ್ವ ಸಾರಿ ಟಿ.ಎಮ್.ವಿಜಯ ಭಾಸ್ಕರ್ ಅವರು ಸಲ್ಲಿಸಿರುವ 6ನೇಯ ಆಡಳಿತ ಸುಧಾರಣೆ ವರದಿಯ ಅಧ್ಯಾಯ 4ರ ಅಧಿಸೂಚನೆ ಸಂಖ್ಯೆ 81ನ್ನು ಕೈಬಿಡುವಂತೆ ಒತ್ತಾಯಿಸಿ ಅಣುಕು ಪ್ರದರ್ಶನದ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 20030 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿ ಒದಗಿಸಿತು ಮತ್ತು ಅದನ್ನು 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 75 ರಷ್ಟು ಹೆಚ್ಚಿಸಲಾಯಿತು. ಕರ್ನಾಟಕ ಅರಣ್ಯ ಇಲಾಖೆಯ ಸೇವೆಗಳ (ನೇಮಕಾತಿ) ತಿದ್ದುಪಡಿ ನಿಯಮಗಳ ಅಡಿಯಲ್ಲಿ, 2018 ರಲ್ಲಿ ಪ್ರಸ್ತಾಪಿಸಲಾದ ಹೊಸ ಕರಡು ನಿಯಮಗಳು, ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವೀಧರರಿಗೆ ವಲಯ ಅರಣ್ಯ ಅಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಮೊದಲೇ ಶೇಕಡ 75 ರಷ್ಟಿದ್ದ ಮೀಸಲಾತಿಯನ್ನು ಶೇ.50ಕ್ಕೆ ಕಡಿಮೆಗೊಳಿಸಿರುತ್ತದೆ ಎಂದು ಗಮನ ಸೆಳೆಯಲಾಯಿತು.ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ (ಅರಣ್ಯಶಾಸ್ತ್ರ)ದಲ್ಲಿ ವಿಷೇಶ ಪರಿಣತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ ವಿದ್ಯಾರ್ಥಿಗಳು ಹಾಲಿ ಇರುವ ನೇರ ನೇಮಕಾತಿಯನ್ನು ರದ್ದು ಗೊಳಿಸಿದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಮತ್ತು ಇತರೆ ವಿಜ್ಞಾನ ಪದವೀಧರರಿಗೆ ಅನ್ಯಾಯವಾಗುತ್ತದೆ ಈ ಎಲ್ಲಾ ಕಾರಣಗಳಿಂದ ವಿಜಯ ಭಾಸ್ಕ‌ರ್ ಸಲ್ಲಿಸಿದ ವರದಿಯ ಅಧ್ಯಾಯ ನಾಲ್ಕರ ಕ್ರಮ ಸಂಖ್ಯೆ 81 ನ್ನು ಕೈಬಿಡುವಂತೆ ಆಗ್ರಹಿಸಿದರುಪ್ರತಿಭಟನೆಯಲ್ಲಿ ಅರಣ್ಯ ವಿದ್ಯಾಲಯದ ವಿದ್ಯಾರ್ಥಿಗಳಾದ ಸೌಮ್ಯ, ಸುಹಾಸ್, ಕೀರ್ತನಾ, ನವನೀತ್, ಆಕಾಶ್, ಆನಂದ್, ಮನೋಜ್, ಚೇತನ್ ಮತ್ತಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.