ಸಾರಾಂಶ
ಕನ್ನಡ ನಾಡು ಹಿತರಕ್ಷಣಾ ಸಮಿತಿ ತಾಲೂಕು ಘಟಕದ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷರನ್ನಾಗಿ ಅರಶಿನಘಟ್ಟ ಸುರೇಶ್ ಅವರನ್ನು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ನೇಮಕ ಮಾಡಿ, ಆದೇಶ ಪತ್ರವನ್ನು ವಿತರಣೆ ಮಾಡಿದರು.
- ಕನ್ನಡ ನಾಡು ಹಿತರಕ್ಷಣಾ ಸಮಿತಿಯಿಂದ ಆದೇಶ ಪತ್ರ - - - ಚನ್ನಗಿರಿ: ಕನ್ನಡ ನಾಡು ಹಿತರಕ್ಷಣಾ ಸಮಿತಿ ತಾಲೂಕು ಘಟಕದ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷರನ್ನಾಗಿ ಅರಶಿನಘಟ್ಟ ಸುರೇಶ್ ಅವರನ್ನು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ನೇಮಕ ಮಾಡಿ, ಆದೇಶ ಪತ್ರವನ್ನು ವಿತರಣೆ ಮಾಡಿದರು.
ಈ ಸಂದರ್ಭ ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಮಾತನಾಡಿ, ಈ ಹಿಂದೆ ತಾಲೂಕು ಸಮಿತಿಯ ಉಪಾಧ್ಯಕ್ಷರಾಗಿದ್ದ ಸುರೇಶ್ ಅವರ ಸಂಘಟನಾ ಚತುರತೆಯನ್ನು ಗಮನಿಸಿ, ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ತಾಲೂಕಿನಲ್ಲಿರುವ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನತೆಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಕೊಡಿಸಲು ನಮ್ಮ ಸಂಘಟನೆಯ ಕಾರ್ಯಕರ್ತರು ಸದಾ ಸನ್ನದ್ಧರಾಗಿರುತ್ತಾರೆ ಎಂದರು.ಚನ್ನಗಿರಿ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆ ಸೇರಿದಂತೆ ಎಲ್ಲ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ನಮ್ಮ ಸಮಿತಿ ಕಡೆಯಿಂದ ಸಹಾಯವಾಣಿ ಸಂಖ್ಯೆ ಆರಂಭಿಸಲಾಗುತ್ತದೆ. ಜನಸಾಮಾನ್ಯರಿಗೆ ಸಮಯಕ್ಕೆ ಸರಿಯಾದ ವೈದ್ಯಕೀಯ ಸೌಲಭ್ಯಗಳು ಸಿಗದೇ ಇದ್ದಾಗ, ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಕ್ಷಣವೇ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಿ ಎಂದರು.
ಈ ಸಂದರ್ಭ ಸಮಿತಿ ಪ್ರಮುಖರಾದ ಯೋಗರಾಜ್, ಸಚಿನ್, ಶಿವು ಹಾಗೂ ಅಣ್ಣಪ್ಪ ಮೊದಲಾದವರು ಹಾಜರಿದ್ದರು.- - - -17ಕೆಸಿಎನ್‌ಜಿ3:
ಕನ್ನಡನಾಡು ಹಿತರಕ್ಷಣಾ ಸಮಿತಿ ತಾಲೂಕು ಘಟಕದ ಆರೋಗ್ಯ ರಕ್ಷಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅರಶಿನಘಟ್ಟ ಸುರೇಶ್ ಅವರಿಗೆ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಆದೇಶ ಪತ್ರ ವಿತರಿಸಿ, ಅಭಿನಂದಿಸಿದರು.