ಸಾರಾಂಶ
ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಧರ್ಮಶೇಖರ್ ಹೇಳಿದರು. ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ 14ನೇ ಸಭೆ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಕರ ಮಾರ್ಗದರ್ಶನ ಸಮಿತಿಯ ಸದಸ್ಯರ ಜನಪರ ಕಾಳಜಿ ಜೊತೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅರಸೀಕೆರೆ ಪ್ರಥಮ ಸ್ಥಾನದಲ್ಲಿದೆ ಎಂದು ಸಂತಸ ಹಂಚಿಕೊಂಡರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಧರ್ಮಶೇಖರ್ ಹೇಳಿದರು.ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ 14ನೇ ಸಭೆ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಕರ ಮಾರ್ಗದರ್ಶನ ಸಮಿತಿಯ ಸದಸ್ಯರ ಜನಪರ ಕಾಳಜಿ ಜೊತೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅರಸೀಕೆರೆ ಪ್ರಥಮ ಸ್ಥಾನದಲ್ಲಿದೆ ಎಂದು ಸಂತಸ ಹಂಚಿಕೊಂಡರು.
ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದರೆ ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಅಲ್ಲಲ್ಲಿ ಸಣ್ಣಪುಟ್ಟ ದೂರುಗಳು ಕೇಳಿ ಬರುತ್ತಿದ್ದು, ಇದನ್ನು ಚರ್ಚಿಸಿ ಕ್ರಮ ಕೈಗೊಳ್ಳೋಣವೆಂದರೆ, ಸಾರಿಗೆ ಇಲಾಖೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆಗೆ ಸಾರಿಗೆ ಇಲಾಖೆಯ ಜಿಲ್ಲಾಧಿಕಾರಿಗಳು ಭಾಗವಹಿಸದೆ ಹೋದರೆ ಹೇಗೆ ಸರಿಪಡಿಸುವುದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ಸಭೆಗೆ ಸಾರಿಗೆ ಇಲಾಖೆಯ ಜಿಲ್ಲಾಧಿಕಾರಿಗಳನ್ನು ಸಭೆಗೆ ಕರೆಸುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಜವನಪ್ಪ, ಸಮಿತಿಯ ಸದಸ್ಯರಾದ ಜಾಜೂರು ಸಿದ್ದೇಶ್, ಶಿವಕುಮಾರ್, ಪ್ರದೀಪ್, ಕಮಲಮ್ಮ ಸೇರಿದಂತೆ ಮತ್ತು ಇತರರು ಪಾಲ್ಗೊಂಡಿದ್ದರು.