ಸೋಮವಾರಪೇಟೆ: ಇಲ್ಲಿನ ತಾಲೂಕು ಆಡಳಿತ ತಾ.ಪಂ. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕು ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ೧೧೧ನೇ ಜನ್ಮದಿನವನ್ನು ತಾಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ಸೋಮವಾರಪೇಟೆ: ಇಲ್ಲಿನ ತಾಲೂಕು ಆಡಳಿತ ತಾ.ಪಂ. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕು ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ೧೧೧ನೇ ಜನ್ಮದಿನವನ್ನು ತಾಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಡಿ. ದೇವರಾಜು ಅರಸುರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಹಸೀಲ್ದಾರ್ ಕೃಷ್ಣಮೂರ್ತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಡಗು ವಿವಿ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಜಮೀರ್ ಅಹಮದ್ ಮುಖ್ಯ ಭಾಷಣಕಾರರಾಗಿ ಮಾತನಾಡಿ, ದೇವರಾಜು ಅರಸು ಈ ರಾಜ್ಯಕ್ಕೆ ದೀರ್ಘಾವಧಿ ಮುಖ್ಯಮಂತ್ರಿ ಆಗಿದ್ದವರು. ಕರ್ನಾಟಕದ ಹಿಂದುಳಿದ ವರ್ಗಗಳ ಕೈ ಹಿಡಿದ ನಿಜವಾದ ನಾಯಕ, ಭೂ ಸುಧಾರಣೆ ಮಾಡುವ ಮೂಲಕ ಹಲವಾರು ಯೋಜನೆಗಳೊಂದಿಗೆ ಬಡವರ ಬದುಕಿಗೆ ಆಸರೆಯಾಗಿದ್ದರು ಎಂದು ಬಣ್ಣಿಸಿದರು. ಅಧ್ಯಕ್ಷತೆ ವಹಿಸಿ ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಮಾತನಾಡಿ, ಅರಸು ಅಂದಿನ ಕಾಲದಲ್ಲಿ ಶಿಕ್ಷಣಕ್ಕೆ ಬಹಳಷ್ಟು ಒತ್ತು ನೀಡಿದ್ದಾರೆ, ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ಹಾಸ್ಟೆಲ್‌ಗಳನ್ನು ತೆರೆಯುವ ಮೂಲಕ ಬಡ ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣ ಆಗಿದ್ದರು. ಅಕಾಲಿಕ ಮರಣಕ್ಕೆ ಈಡಾದ ಅವರು ಇನ್ನಷ್ಟು ದಿನ ಬದುಕಿದ್ದರೆ ನಮ್ಮ ರಾಜ್ಯ ರಾಷ್ಟ್ರದಲ್ಲೇ ಮಾದರಿಯಾಗಿ ಇರುತ್ತಿತ್ತು ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಂ. ದಲಿತ ಸಂಘಟನೆಯ ಪ್ರಮುಖರಾದ ಜಯಪ್ಪ ಹಾನಗಲ್. ತಾಪಂ ಕಾರ್ಯನಿರ್ವಹಣಾ ಅಧಿಕಾರಿಗಳಾದ ಪರಮೇಶ್ ಕುಮಾರ್, ಮುಖ್ಯಧಿಕಾರಿ ಪಟ್ಟಣ ಪಂಚಾಯಿತಿ ಕೃಷ್ಣಪ್ರಸಾದ್, ಬಿಇಒ ಕೃಷ್ಣಪ್ಪ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇ ಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.