ಪ್ರವಾಹ ಪೀಡಿತ ಪ್ರದೇಶಗಳಿಗೆ ಅರವಿಂದ ಬೆಲ್ಲದ ಭೇಟಿ

| Published : Aug 02 2024, 12:48 AM IST

ಸಾರಾಂಶ

ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮತ್ತು ಸಂಸದ ಪಿ.ಸಿ.ಗದ್ದೀಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಮಖಂಡಿ: ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮತ್ತು ಸಂಸದ ಪಿ.ಸಿ.ಗದ್ದೀಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಕೋಳ, ಆಲಗೂರು, ಜಂಬಗಿ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದರು. ಆಲಗೂರು ಗ್ರಾಮದ ಮೃತ ರೈತ ಸಿದ್ಧಪ್ಪನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರ್ಕಾರದಿಂದ ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಬಿಜೆಪಿ ಸರ್ಕಾರದಲ್ಲಿ ಬೆಳೆಗಳಿಗೆ ಮತ್ತು ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿಗೆ ಪರಿಹಾರ ಕೊಡಲಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡುತ್ತಿಲ್ಲವೆಂದರು.

ರಾಜ್ಯ ಸರ್ಕಾರ ರೈತರ ಬೆಳೆಹಾನಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಶಾಸಕ ಜಗದೀಶ ಗುಡಗುಂಟಿ, ತಹಸೀಲ್ದಾರ್‌ ಸದಾಶಿವ ಮಕ್ಕೊಜಿ ಮತ್ತು ಬಿಜೆಪಿಯ ಜಿಲ್ಲಾಧ್ಯಕ್ಷ ,ತಾಲೂಕನ ಪದಾಧಿಕಾರಿಗಳು ಇದ್ದರು.