ಸರಳವಾಗಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕ‌ರ್ ಜಯಂತಿ ಆಚರಣೆ

| Published : Apr 15 2024, 01:15 AM IST

ಸಾರಾಂಶ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಜಿಲ್ಲಾಡಳಿತ ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಾಲತಿ, ಮತ್ತಿತರ ಗಣ್ಯರು ಪುಷ್ಪನಮನ ಸಲ್ಲಿಸಿದರು.