ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

| Published : Jan 25 2025, 01:04 AM IST

ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 2022ರ ಜ.1ರಿಂದ 2022ರ ಡಿ.31ರ ಅವಧಿಯಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು 2022ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲಾಗುವುದು. 2023ರ ಜ.1ರಿಂದ 2023ರ ಡಿ.31ರ ಅವಧಿಯ ಮಧ್ಯೆ ಪ್ರಕಟಗೊಂಡ ಪುಸ್ತಕಗಳನ್ನು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲಾಗುವುದು. ಅಕಾಡೆಮಿಯಿಂದ ಪ್ರಕಟವಾದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಅರೆಭಾಷೆ ಕವನ ಸಂಕಲನ, ಅರೆಭಾಷೆ ಕಥಾ ಸಂಕಲನ, ಅರೆಭಾಷೆ ಕಾದಂಬರಿ, ಅರೆಭಾಷೆ ನಾಟಕ, ಅರೆಭಾಷೆ ಲಲಿತ ಪ್ರಬಂಧ, ಅರೆಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಧ್ಯಯನಗ್ರಂಥ ಹಾಗೂ ಅನ್ಯ ಭಾಷೆಯಿಂದ ಅರೆಭಾಷೆಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು. ಹೆಚ್ಚು ಜನಮನ್ನಣೆ ಗಳಿಸಿದ ಪುಸ್ತಕದ ಮೂರು ಪ್ರಕಾರಗಳನ್ನು ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು 2022 ರಲ್ಲಿ ಪ್ರಕಟವಾದ ಪುಸ್ತಕಗಳ ನಾಲ್ಕು ಪ್ರತಿಗಳನ್ನು ಲಕೋಟೆಯ ಮೇಲೆ ‘ಪುಸ್ತಕ ಬಹುಮಾನ ಯೋಜನೆ 2022’ 2023 ರಲ್ಲಿ ಪ್ರಕಟವಾದ ಪುಸ್ತಕಗಳ ನಾಲ್ಕು ಪ್ರತಿಗಳನ್ನು ಲಕೋಟೆಯ ಮೇಲೆ ‘ಪುಸ್ತಕ ಬಹುಮಾನ ಯೋಜನೆ 2023’ ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ-571 201. ಈ ವಿಳಾಸಕ್ಕೆ ಕಳುಹಿಸಿಕೊಡುವುದು. ಅರ್ಜಿ ಸಲ್ಲಿಸಲು ಫೆ.9 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ: ರಿಜಿಸ್ಟ್ರಾರ್‌, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ: 08272-223055, ಮೊಬೈಲ್ ಸಂಖ್ಯೆ 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ರಿಜಿಸ್ಟ್ರಾರ್ ತಿಳಿಸಿದ್ದಾರೆ.