ಬೇಲೂರಿನ ಅರೇಹಳ್ಳಿ ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

| Published : Apr 12 2024, 01:07 AM IST

ಬೇಲೂರಿನ ಅರೇಹಳ್ಳಿ ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ
Share this Article
  • FB
  • TW
  • Linkdin
  • Email

ಸಾರಾಂಶ

ಬೇಲೂರು ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ, ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ.ಮಲ್ಲೇಶ್, ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತೀಚೆಗೆ ಕಾಂಗ್ರೆಸ್ ಮುಖಂಡರ ಸಮ್ಮಲ್ದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

ಕಾಂಗ್ರೆಸ್ ಮುಖಂಡರಾದ ತುಳಸಿದಾಸ್‌, ಜವರೇಗೌಡ ಸ್ವಾಗತ

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ, ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ.ಮಲ್ಲೇಶ್, ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತೀಚೆಗೆ ಕಾಂಗ್ರೆಸ್ ಮುಖಂಡರಾದ ತುಳಸಿದಾಸ್ ಗೃಹದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಚ್.ಕೆ.ಜವರೇಗೌಡ, ಜಿಲ್ಲಾಧ್ಯಕ್ಷ ಇ.ಎಚ್.ಲಕ್ಷ್ಮಣ್ ಹಾಗೂ ಗ್ರಾನೆಟ್ ರಾಜಶೇಖರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಸೇರ್ಪಡೆಗೊಂಡರು

ಈ ವೇಳೆ ಮಾತನಾಡಿದ ಎಚ್.ಕೆ.ಜವರೇಗೌಡ, ‘ಅಧಿಕಾರದ ಆಸೆಗೆ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷಕ್ಕೆ ಜಿಲ್ಲೆಯ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆ ಪ್ರಚಾರಕ್ಕಾಗಿ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದು ಅಂದು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಹೇಳಿದರು.

ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ 1999ರ ರೀತಿ ಮರುಕಳಿಸುವ ಸಾಧ್ಯತೆ ಇದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಭದ್ರವಾದ ಆಡಳಿತ ನೀಡಲಾಗುತ್ತಿದೆ. ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಮನೆಗಳಿಗೂ ತಲುಪುತ್ತಿದ್ದು ಸರ್ಕಾರದ ಸಾಧನೆ ಹಾಗೂ ಅಭಿವೃದ್ಧಿಗಾಗಿ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದರು

ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೃಷ್ಣೇಗೌಡ, ಹೇಮಂತ್ ಹಾಜರಿದ್ದರು.

ಜೆಡಿಎಸ್ ಪಕ್ಷವು ಕೋಮುವಾದಿ ಬಿಜೆಪಿಯೊಂದಿಗೆ ಮಾಡಿಕೊಂಡಿರುವ ಅಪವಿತ್ರ ಮೈತ್ರಿ ಬಿಜೆಪಿಯ ಹಿಂದುತ್ವ ಸಂವಿಧಾನ ವಿರೋಧಿ ಹೇಳಿಕೆಗಳಿಂದ ಬೇಸತ್ತು ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವೆ.

ಅಣ್ಣಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ. ಅರೇಹಳ್ಳಿ.

ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರು ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.