ಸ್ನೇಹಿತರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

| Published : Sep 15 2024, 01:48 AM IST

ಸಾರಾಂಶ

ಸ್ನೇಹಿತರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಕನ್ನಡಪ್ರಭ ವಾರ್ತೆ ಪಾವಗಡ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ ನಡೆದು ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ಪಟ್ಟಣದಪಟ್ಟಣದ ಆದರ್ಶ ನಗರದ ಮರಿಗಮ್ಮ ದೇವಿ ದೇವಸ್ಥಾನದ ಸಮೀಪದಲ್ಲಿ ಜರುಗಿದೆ. ಗಾಯಗೊಂಡವರನ್ನು ಭಾರ್ಗವ್‌ ಎಂದು ಗುರುತಿಸಲಾಗಿದೆ.

ಸ್ನೇಹಿತರಾದ ಭಾರ್ಗವ್‌, ನರಸಿಂಹ, ಹರಿಕುಮಾರ್ ಹಾಗೂ ನರಸಿಂಹಮೂರ್ತಿ ನಡುವೆ ಯಾವುದೋ ವಿಷಯಕ್ಕೆ ಮಾತಿನ ಚಕಮಕಿ ನಡೆದಿದೆ. ಆಗ ನರಸಿಂಹ, ಹರಿಕುಮಾರ್‌ ಮತ್ತು ನರಸಿಂಹಮೂರ್ತಿ ಸೇರಿ ಭಾರ್ಗವ್‌ ಮೇಲೆ ಹಲ್ಲೆ ನಡೆಸಿ ಕುತ್ತಿಗೆ ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಭಾರ್ಗವ್‌ ಸಹಾಯಕ್ಕೆ ಕೂಗಿಕೊಂಡ ಪರಿಣಾಮ ಸ್ಥಳೀಯರು ಜಗಳ ಬಿಡಿಸಿ ಗಾಯಗೊಂಡಿದ್ದ ಭಾರ್ಗವ್‌ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.