ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ

| Published : Dec 08 2023, 01:45 AM IST

ಸಾರಾಂಶ

ಪೊಲೀಸ್ ಇಲಾಖೆಯ ಎಆರ್‌ಎಸ್‌ಐ ಚೆನ್ನಕೇಶವ ಗೌರವ ವಂದನೆ ನಡೆಸಿಕೊಟ್ಟರು. ಪೊಲೀಸ್ ಬ್ಯಾಂಡ್ ನೇತೃತ್ವ ವಹಿಸಿದ್ದ ಸಿದ್ದೇಶ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಪೊಲೀಸರು, ಸೈನಿಕ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು, ಇತರರು ಗೌರವ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಗುರುವಾರ ಜರುಗಿತು.

ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್‌ಸಿಂಗ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎನ್‌ಸಿಸಿ ಅಧಿಕಾರಿ ಕರ್ನಲ್ ಜೆಫಿರಿನ್ ಅರಾನ್ಹಾ, ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಏರ್ ಕಮಾಂಡರ್ (ನಿವೃತ್ತ) ಕಂಬಿರಂಡ ದೇವಯ್ಯ, ಲೆ.ಕರ್ನಲ್ (ನಿವೃತ್ತ) ಎಂ.ನಾಚಪ್ಪ, ಮೇಜರ್ (ನಿವೃತ್ತ) ಒ.ಎಸ್.ಚಿಂಗಪ್ಪ, ಮಡಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಕುಟ್ಟಪ್ಪ, ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಿರೀಶ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ಎ.ಪಿ.ಸುಬ್ಬಯ್ಯ, ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ರೆಡ್‌ಕ್ರಾಸ್ ಜಿಲ್ಲಾ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ ರೈ ಇತರರು ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು.

ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿ, ಮೌನಾಚರಿಸಲಾಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿದರು.

ಪೊಲೀಸ್ ಇಲಾಖೆಯ ಎಆರ್‌ಎಸ್‌ಐ ಚೆನ್ನಕೇಶವ ಗೌರವ ವಂದನೆ ನಡೆಸಿಕೊಟ್ಟರು. ಪೊಲೀಸ್ ಬ್ಯಾಂಡ್ ನೇತೃತ್ವ ವಹಿಸಿದ್ದ ಸಿದ್ದೇಶ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಪೊಲೀಸರು, ಸೈನಿಕ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು, ಇತರರು ಗೌರವ ಸಲ್ಲಿಸಿದರು.

ಬಳಿಕ ಮಾತನಾಡಿದ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು, ರಾಷ್ಟ್ರದ ಗಡಿ ಪ್ರದೇಶದಲ್ಲಿ ಹಗಲಿರುಳು ಶ್ರಮಿಸುವ ವೀರ ಯೋಧರ ಧೈರ್ಯ, ಸಾಹಸವನ್ನು ಪ್ರತಿಯೊಬ್ಬರೂ ಪ್ರಶಂಸಿಸಬೇಕು. ವೀರ ಸೇನಾನಿಗಳ ಕಷ್ಟಕ್ಕೆ ಸ್ಪಂದಿಸಬೇಕು, ಹುತಾತ್ಮ ಯೋಧರನ್ನು ಸದಾ ಸ್ಮರಿಸಬೇಕು ಎಂದರು.