ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪದಗ್ರಹಣ

| Published : Jun 14 2024, 01:08 AM IST

ಸಾರಾಂಶ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿ ಜ್ಯೋತಿ, ಶೋಭ ಇದ್ದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿ ಜ್ಯೋತಿ, ಶೋಭ ಇದ್ದರು.

ಸದಾನಂದಗೌಡ ಮಾವಜಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಾವಜಿ ಕುಟುಂಬದವರಾಗಿದ್ದಾರೆ.

ಅಧಿಕಾರ ವಹಿಸಿಕೊಂಡ ಬಳಿಕ ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಮಡಿಕೇರಿ ಶಾಸಕ ಡಾ.ಮಂತರ್‌ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡರು. ಶಾಸಕ, ಜಿಲ್ಲಾಧಿಕಾರಿ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷ ಸದಾನಂದ ಮಾವಜಿ ಅವರನ್ನು ಅಭಿನಂದಿಸಿದರು.

ಸುವರ್ಣ ಕರ್ನಾಟಕ ಸಮುಚ್ಚಯ ಭವನ ಶೀಘ್ರದಲ್ಲಿ ಪೂರ್ಣಗೊಳಿಸಿಕೊಡಬೇಕಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಅವರಲ್ಲಿ ನೂತನ ಅಧ್ಯಕ್ಷರು ಮನವಿ ಮಾಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚಂದ್ರಶೇಖರ್ ಪೆರಾಲು, ರಿಜಿಸ್ಟ್ರಾರ್ ಚಿನ್ನಸ್ವಾಮಿ ಇದ್ದರು.