ನಿರ್ಗತಿಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿ ಸೂರಿನ ವ್ಯವಸ್ಥೆ

| Published : Feb 27 2025, 12:33 AM IST

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಿರಾಶ್ರಿತರು, ನಿರ್ಗತಿಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಡುವ ಮೂಲಕ ಸೂರಿನ ವ್ಯವಸ್ಥೆ ಮಾಡಿ ಆ ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಕುಪ್ಪೂರು-ತಮ್ಮಡಿಹಳ್ಳಿ ಮಠದ ಶ್ರೀ ಡಾ. ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಕನ್ನಡ ಪ್ರಭ ವಾರ್ತೆ ತಿಪಟೂರು

ತಾಲೂಕಿನ ಬಿಳಿಗೆರೆ ವಲಯದ ಅರಳುಗುಪ್ಪೆ ಗ್ರಾಮದ ಸಿದ್ದಗಂಗಮ್ಮರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದ ಶ್ರೀಗಳು ಗ್ರಾಮಾಭಿವೃದ್ಧಿ ಯೋಜನೆ ಗ್ರಾಮಾಂತರದಿಂದ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜದ ಕಟ್ಟಕಡೆಯ ಜನರಿಗೆ ಸೂಕ್ತ ಆಶ್ರಯ ನೀಡುತ್ತಿರುವ ವೀರೇಂದ್ರ ಹೆಗ್ಗಡೆ ಅವರು ಹಾಗೂ ಮಾತೃಶ್ರೀ ಹೇಮಾವತಿಯ ಅಮ್ಮನವರ ಕಾರ್ಯ ನಿಜಕ್ಕೂ ಮೆಚ್ಚುವಂತಹದ್ದು. ಉತ್ತಮ ಯೋಜನೆಗಳನ್ನು ಹಮ್ಮಿಕೊಂಡು ಬಡ, ನಿರ್ಗತಿಕ ಜನರಿಗೆ ಆಸರೆಯಾಗಿದೆ. ಬ್ಯಾಂಕ್ ಮೂಲಕ ಸಾಲಸೌಲಭ್ಯ ಕೊಡಿಸುವ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಟ್ಟಿದೆ ಎಂದರು.ಈ ಸಂದರ್ಭದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ , ಟೈಡ್ ಸಂಸ್ಥೆಯ ಎಕ್ಸಿಕ್ಯೂಟಿವ್ ಮ್ಯಾನೇಜರ್ ಶೈಲಾಕುಮಾರಿ, ಕೆ. ಸುರೇಶ್, ಗ್ರಾ.ಪಂ ಅಧ್ಯಕ್ಷ ರಾಜಣ್ಣ, ಸದಸ್ಯ ನೇತ್ರಾನಂದ, ಗೋವಿಂದರಾಜು, ಕೃಷ್ಣಮೂರ್ತಿ, ಭಾಗ್ಯಲಕ್ಷ್ಮಿ, ರಮೇಶ್, ಶೈಲಾ ಇತರರಿದ್ದರು.