ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ

| Published : Dec 11 2024, 12:46 AM IST

ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಬಿಡದಿ, ರಾಮನಗರ ಪಟ್ಟಣ, ಚನ್ನಪಟ್ಟಣದಲ್ಲಿ ಜಿಲ್ಲೆಯ ನಾಗರಿಕರು ಎಸ್.ಎಂ.ಕೃಷ್ಣರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ

ರಾಮನಗರ:

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಬೆಂಗಳೂರಿನಿಂದ ಮದ್ದೂರಿಗೆ ತೆರಳುವ ಮಾರ್ಗಮಧ್ಯೆ ಜಿಲ್ಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಬಿಡದಿ, ರಾಮನಗರ ಪಟ್ಟಣ, ಚನ್ನಪಟ್ಟಣದಲ್ಲಿ ಜಿಲ್ಲೆಯ ನಾಗರಿಕರು ಎಸ್.ಎಂ.ಕೃಷ್ಣರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.

ದಿವಂಗತರ ಅಂತ್ಯಕ್ರಿಯೆ ಡಿ. 11ರ ಬುಧವಾರ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಮದ್ದೂರಿಗೆ ತೆರಳುವ ಮಾರ್ಗ ಮಧ್ಯೆ ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣ ಮಾರ್ಗವಾಗಿ ಕೃಷ್ಣರವರ ಪಾರ್ಥಿವ ಶರೀರ ಹೊತ್ತ ವಾಹನ ಸಾಗಲಿದೆ.

ದಿವಂಗತ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವು ಡಿ.11ರ ಬೆಳಗ್ಗೆ ಬೆಂಗಳೂರಿನ ಸದಾಶಿವ ನಗರದಿಂದ ಮಂಡ್ಯದ ಸೋಮನಹಳ್ಳಿಗೆ ಹಳೇ ಮೈಸೂರು ರಸ್ತೆಯಲ್ಲಿ ಹಾದುಹೋಗುತ್ತದೆ. ರಾಮನಗರ ಜಿಲ್ಲೆಯ ಬಿಡದಿಯ ಬಿ.ಜಿ.ಎಸ್ ಸರ್ಕಲ್‌ನಲ್ಲಿ ಅಂದು ಬೆಳಿಗ್ಗೆ 8.45 ರಿಂದ 9 ಗಂಟೆಗೆ, ರಾಮನಗರದ ಐಜೂರು ಸರ್ಕಲ್‌ನಲ್ಲಿ ಬೆಳಿಗ್ಗೆ 9.30ಕ್ಕೆ ಆಗಮಿಸುತ್ತದೆ. ನಂತರ ಚನ್ನಪಟ್ಟಣದ ಗಾಂಧಿ ಭವನ ಸರ್ಕಲ್‌ನಲ್ಲಿ ಬೆಳಿಗ್ಗೆ 10 ಗಂಟೆಯಿಂದ 10.15ಕ್ಕೆ ಆಗಮಿಸುತ್ತದೆ. ಈ ಸಂದರ್ಭದಲ್ಲಿ 15 ರಿಂದ 20 ನಿಮಿಷಗಳವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು, ಇದಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಯಶವಂತ್ ತಿಳಿಸಿದರುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಅಂತಿಮ ದರ್ಶನದ ವೇಳೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

------

10ಕೆಆರ್ ಎಂಎನ್ 16.ಜೆಪಿಜಿ

ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.