ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
KannadaprabhaNewsNetwork | Published : Oct 06 2023, 01:08 AM IST
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಸಾರಾಂಶ
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ೪೦ ಸಾವಿರ ರು. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕೆಜಿಎಫ್: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ ರಾಬರ್ಟನ್ ಪೇಟೆ ಪೊಲೀಸರು ೪೦ ಸಾವಿರ ರು. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಕುಪ್ಪಂ ತಾಲೂಕಿನ ಬಾಲರಾಜು(೨೨) ಎಂಬುವವನಾಗಿದ್ದು, ಉರಿಗಾಂಪೇಟೆಯ ಪೆದ್ದಪಲ್ಲಿ ರಸ್ತೆಯ ಉರ್ರನಾಗನಹಳ್ಳಿ ಗ್ರಾಮಕ್ಕೆ ಹೋಗುವ ದಾರಿಯಲ್ಲಿ ೮೯೦ ಗ್ರಾಂ ಗಾಂಜಾ ಮಾರಾಟ ಮಾಡುತ್ತಿದ್ದ. ರಾಬನ್ ಪೇಟೆ ಪೊಲೀಸ್ ಸಬ್ ಇನ್ಸಪೆಕ್ಟರ್ ತ್ಯಾಗರಾಜು ಮತ್ತು ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಗಾಂಜಾ ವಶಪಡಿಸಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರು.