ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಬಾಬು ಬಂಧನ

| Published : Jun 27 2024, 01:10 AM IST / Updated: Jun 27 2024, 05:49 AM IST

Jails in India

ಸಾರಾಂಶ

ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದನು. ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್‌ ಕಂಪನಿಯಲ್ಲಿ ಉದಯ್‌ ಅಲಿಯಾಸ್‌ ಅಶೋಕ್‌ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಹೋಗಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಪೊಲೀಸರು ಅಟ್ಟಿಕಾ ಬಾಬು ಅವರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.