ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್‌ ಪ್ರತಿಭಟನೆ

| Published : Mar 24 2024, 01:36 AM IST

ಸಾರಾಂಶ

ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.

ಯಾದಗಿರಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಪ್‌ ಜಿಲ್ಲಾಧ್ಯಕ್ಷ ಚಂದ್ರಶೇಖರ ಗುತ್ತೇದಾರ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳಾದ ಇಡಿ ಮತ್ತು ಸಿಬಿಐ ಮೊದಲಾದವುಗಳನ್ನು ದುರುಪಯೋಗಪಡಿಸಿಕೊಂಡು, ವಿರೋಧ ಪಕ್ಷಗಳನ್ನು ದಮನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇದೀಗ ಲೋಕಸಭಾ ಸಾರ್ವತ್ರಿಕ ಚುಣಾವಣೆಗಳು ಜರುಗುತ್ತಿರುವ ಸಂದರ್ಭದಲ್ಲಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಅಧಿಕಾರ ದುರುಪಯೋಗ ವೈಫಲ್ಯಗಳನ್ನು ಸಮರ್ಥವಾಗಿ ದೇಶದ ಜನರ ಮುಂದೆ ತೆರೆದಿಡುತ್ತಿರುವ ಸ್ವಚ್ಛ, ದಕ್ಷ ಹಾಗೂ ಭ್ರಷ್ಟಾಚಾರ ರಹಿತ ಆಮ್ ಆದ್ಮಿ ಪಕ್ಷ ಮತ್ತು ಕೇಜ್ರಿವಾಲರ ವರ್ಚಸ್ಸಿನಿಂದ ಭಯಭೀತಗೊಂಡಿರುವ ಮೋದಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿ ಇಡಿ-ಸಿಬಿಐ ಅಂತಹ ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷ ಹಾಗೂ ನಾಯಕರನ್ನು ಮಟ್ಟ ಹಾಕಲು ಪ್ರಯತ್ನಿಸಿತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಭಕ್ರಿ ಮಾತನಾಡಿ, ಇಡಿ ಸಿಬಿಐ ಕೇಸ್‌ಗಳಲ್ಲಿ, ಭ್ರಷ್ಟಾಚಾರಗಳಲ್ಲಿ ಸಿಲುಕಿಕೊಂಡ ವಿರೋಧ ಪಕ್ಷದ ವಿವಿಧ ನಾಯಕರನ್ನು ಹೆದರಿಸಿ ಪಕ್ಷದಲ್ಲಿ ಸೇರಿಸಿಕೊಂಡು ಅಂತವರ ವಿರುದ್ಧದ ಪ್ರಕರಣಗಳನ್ನು ಮುಚ್ಚಿಹಾಕಲಾಗುತ್ತಿದೆ. ಎಷ್ಟೇ ಕಿರುಕಳ ನೀಡಿದರೂ ಬಿಜೆಪಿ ಸೇರದೆ ದೇಶದ ಉಳಿವಿಗಾಗಿ ಸಂವಿಧಾನದ ಸಂರಕ್ಷಣೆಗಾಗಿ ಭ್ರಷ್ಟಾಚಾರ, ಕೋಮುವಾದ ಇವುಗಳನ್ನು ಕಿತ್ತೆಸೆಯಲು ಕೇಂದ್ರ ಸರ್ಕಾರವನ್ನು ಪ್ರಬಲವಾಗಿ ವಿರೋಧಿಸುತ್ತಿರುವ ಆಮ್ ಆದ್ಮಿ ಪಕ್ಷ ಮತ್ತು ಅದರ ನಾಯಕರನ್ನು ವಿಷೇಶವಾಗಿ ಅರವಿಂದ ಕೇಜ್ರಿವಾಲ್‌ರನ್ನು ಭಂದಿಸುವ ಮೂಲಕ ಸಮರ್ಥ ಪ್ರತಿಪಕ್ಷವನ್ನು ದಮನಗೊಳಿಸಲು ಪ್ರಯತ್ನಿಸುತ್ತಿದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರವನ್ನು ಪ್ರಸ್ತುತ ನಡೆಯುತ್ತಿರವ ಸಾರ್ವತ್ರಿಕ ಲೋಕಸಭಾ ಚುಣಾವಣೆಯಲ್ಲಿ ಮತ್ತು ವಿವಿಧ ರಾಜ್ಯ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆದು ಇಂಡಿಯಾ ಒಕ್ಕೂಟಕ್ಕೆ ಪ್ರಭುದ್ಧ ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡುತ್ತೇವೆ ಎಂದು ಮನವಿ ಮಾಡಿಕೊಂಡರು.

ಜಿಲ್ಲಾ ಮುಖಂಡರಾದ ಸುಭಾಶ್ ತೇಲ್ಕರ್ ವಕೀಲರು, ಶರಣಪ್ಪ ದೊರೆ, ಕಮಲ್ ಪಟೇಲ್ ಕ್ಯಾತನಾಳ ಇನ್ನಿತರರು ಇದ್ದರು.